
ಮುಜಾಫರ್ನಗರ(ಡಿ.31): ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಇಬ್ಬರು ಬಾಲಕಿಯರನ್ನು ಗೋ ಹತ್ಯೆ ಆರೋಪದಡಿಯಲ್ಲಿ ಪೊಲೀಸರು ಬಂಧಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ.
12 ವರ್ಷದ ಓರ್ವ ಬಾಲಕಿ ಹಾಗೂ 16 ವರ್ಷದ ಇನ್ನೋರ್ವ ಬಾಲಕಿಯರನ್ನು ಅವರ ತಾಯಿ ಸೇರಿದಂತೆ ಇತರರೊಂದಿಗೆ ಗೋ ಹತ್ಯೆ ಆರೋಪದಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 9 ಮಂದಿಯನ್ನು ಬಂಧಿಸಿದ ಪೊಲೀಸರು ಅವರೊಂದಿಗೆ ಮಕ್ಕಳನ್ನು ಕರೆದೊಯ್ದು ಜೈಲಿಗೆ ಹಾಕಿದ್ದಾರೆ.
ಮಕ್ಕಳನ್ನು ಬಾಲಾಪರಾಧಿಗಳನ್ನು ಹಾಜರುಪಡಿಸುವ ಕೋರ್ಟ್’ಗೂ ಹಾಜರುಪಡಿಸದೇ, ಬಾಲಾಪರಾಧಿಗಳನ್ನು ಇರಿಸುವ ಸ್ಥಳದಲ್ಲಿಯೂ ಇರಿಸದೇ ಜೈಲಿನಲ್ಲಿ ಇರಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಪೋಷಕರೊಂದಿಗೆ ಮಕ್ಕಳನ್ನು ಬಂಧಿಸಿದ್ದರಿಂದ ಪೊಲೀಸರ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ತನಿಖೆಗೆ ಆದೇಶ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.