ಮಾ 1 ರಿಂದ 17 ರ ವರೆಗೆ ದ್ವಿತೀಯ ಪಿಯು ಪರೀಕ್ಷೆ

By Suvarna Web DeskFirst Published Feb 26, 2018, 12:19 PM IST
Highlights

ಮಾರ್ಚ್ 1 ರಿಂದ 17 ರ ತನಕ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.  ಪರೀಕ್ಷೆಗೆ ಪಿಯು ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಸಿ ಶಿಖಾ ಹೇಳಿದ್ದಾರೆ. 

ಬೆಂಗಳೂರು (ಫೆ.26): ಮಾರ್ಚ್ 1 ರಿಂದ 17 ರ ತನಕ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.  ಪರೀಕ್ಷೆಗೆ ಪಿಯು ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಸಿ ಶಿಖಾ ಹೇಳಿದ್ದಾರೆ. 

3,52,290 ವಿದ್ಯಾರ್ಥಿಗಳು, 3, 37,860 ವಿದ್ಯಾರ್ಥಿನಿಯರು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಒಟ್ಟು  690150 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಎದುರಿಸಲಿದ್ದಾರೆ. ಒಟ್ಟು 1004 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.  ಇದೇ ಮೊದಲ ಬಾರಿಗೆ ಪ್ರಶ್ನೆ ಪತ್ರಿಕೆ ರವಾನೆಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಲಾಗಿದೆ.  ಪ್ರಶ್ನೆ ಪತ್ರಿಕೆ ಹೊತ್ತೊಯ್ಯುವ ಎಲ್ಲಾ ಟ್ರಕ್’ಗಳಿಗೂ ಜಿಪಿಎಸ್ ಕಣ್ಗಾವಲು ಇಡಲಾಗಿದೆ.  ಆಯಾ ಜಿಲ್ಲಾ ಮಟ್ಟದ ಪರೀಕ್ಷಾ ಜವಾಬ್ದಾರಿ ಜಿಲ್ಲಾಧಿಕಾರಿಗಳ ಹೆಗಲಿಗೆ ವಹಿಸಲಾಗಿದೆ ಎಂದು ಶಿಖಾ ಹೇಳಿದ್ದಾರೆ.  
ಪರೀಕ್ಷಾ ಅಕ್ರಮ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.  ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಇದೇ ಮೊದಲ‌ ಬಾರಿಗೆ ಪರೀಕ್ಷಾ ಕೇಂದ್ರ ಗಳಲ್ಲಿ ಉಪನ್ಯಾಸಕರಿಗೆ ಮೊಬೈಲ್ ‌ಬಳಕೆ ನಿಷೇಧ ಹೇರಲಾಗಿದೆ ಎಂದಿದ್ದಾರೆ.  

click me!