
ಶ್ರೀನಗರ: ಪುಲ್ವಾಮಾದಲ್ಲಿ ಸೈನಿಕರನ್ನು ಉಗ್ರನೊಬ್ಬ ಬಲಿ ತೆಗೆದುಕೊಂಡ ಪ್ರಕರಣದ ಕಾವಿನ್ನೂ ಆರಿಲ್ಲ. ಇದೀಗ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದು, ಉಗ್ರರು ಹಾಗೂ ಸೇನೆ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ.
ಪುಲ್ವಾಮಾದ ತ್ರಾಲ್‌ನಲ್ಲಿ ಉಗ್ರರು ಅಡಗಿಕೊಂಡಿದ್ದಾರೆಂಬ ಪೊಲೀಸರ ಖಚಿತ ಮಾಹಿತಿಯನ್ನಾಧರಿಸಿ ಸೇನೆ ಈ ದಾಳಿ ನಡೆಸಿದೆ. ಗುರಿಯಾಗಿಟ್ಟುಕೊಂಡು ದಾಳಿ ನಡೆಸಿದ ಉಗ್ರರು ಅಡಗಿಕೊಂಡಿದ್ದ ಮನೆಯನ್ನು ನೆಲಕ್ಕುರುಳಿಸಲಾಗಿದೆ.
ಈ ಪ್ರದೇಶದಲ್ಲಿ ಮೊಬೈಲ್ ಇಂಟರ್ನೆಟ್ ಸೌಲಭ್ಯವನ್ನು ಕಡಿತಗೊಳಿಸಲಾಗಿದೆ.
ಪುಲ್ವಾಮಾದಲ್ಲಿ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದು, ಈ ಘಟನೆಗೆ ಜೈಷೆ ಮೊಹ್ಮದ್ ಹೊಣೆ ಹೊತ್ತಿದೆ. ಇದೇ ದಾಳಿಗೆ ಸೇಡು ತೀರಿಸಿಕೊಂಡ ಭಾರತೀಯ ಸೇನೆ, ಪಾಕಿಸ್ತಾನದ ಬಾಲ್‌ಕೋಟ್‌ನಲ್ಲಿ ಜೈಷೇ ತರಬೇತಿ ಕೇಂದ್ರದ ಮೇಲೆ ಏರ್ ಸ್ಟ್ರೈಕ್ ನಡೆಸಿತ್ತು.
ಈ ಮಧ್ಯೆ ನಡೆದ ಮತ್ತೊಂದು ದಾಳಿಯಲ್ಲಿ ಒಬ್ಬ ಅಧಿಕಾರಿ ಹಾಗೂ ಪೊಲೀಸರು ಸೇರಿ ನಾಲ್ವರು ಸೈನಿಕರು ಹುತಾತ್ಮರಾಗಿದ್ದರು. ಪುಲ್ಮಾಮಾ ದಾಳಿಯ ಸಂಚುಕೋರ ಎಂದು ಹೇಳಲಾದ ಜೈಷೆ ಮೊಹ್ಮದ್ ಉಗ್ರನೂ 12 ಗಂಟೆಗಳ ಕಾಲ ನಡೆದ ಎನ್‌ಕೌಂಟರ್‌ನಲ್ಲಿ ಅಸುನೀಗಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.