
ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ವಿಚಾರವಾಗಿ ಬಿಹಾರದ ನ್ಯಾಯಾಲಯವೊಂದು 20 ಮಂದಿಗೆ ಕಠಿಣ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಭಾಗಿಯಾದ ಎಲ್ಲರಿಗೂ 2 ರಿಂದ 7 ವರ್ಷವರೆಗಿನ ಜೈಲು ಶಿಕ್ಷೆ ವಿಧಿಸಿದೆ.
2018ರ ಆಗಸ್ಟ್ ತಿಂಗಳಿನಲ್ಲಿ 19 ವರ್ಷದ ಯುವಕನೊಬ್ಬನನ್ನು ಹತ್ಯೆಗೈದಿರುವ ಶಂಕೆಯ ಮೆರೆಗೆ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರದಂದು ತೀರ್ಪು ನೀಡಿರುವ ನ್ಯಾಯಾಧೀಶ ರಮೇಶ್ ಚಂದ್ರ ದ್ವಿವೇದಿ 20 ಮಂದಿ ಅಪರಾಧಿಗಳಲ್ಲಿ ಐವರಿಗೆ 7 ವರ್ಷ ಹಾಗೂ 15 ಮಂದಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಇವರೆಲ್ಲರನ್ನೂ ನವೆಮಬರ್ 28 ರಂದು ದೋಷಿಗಳೆಂದು ಘೋಷಿಸಲಾಗಿತ್ತು.
ಈ ಘಟನೆಯು ಆಗಸ್ಟ್ 20 ರಂದು ಬಿಹಿಯಾಂದ ರೈಲ್ವೇ ಹಳಿ ಬಳಿಯ ರೆಡ್ ಲೈಟ್ ಪ್ರದೇಶದಲ್ಲಿ ನಡೆದಿತ್ತು. ಇಲ್ಲಿ ವಿಮಲೇಶ್ ಸಾಹ್ ಎಂಬವರ ಮೃತದೇಹವು ನಾಪತ್ತೆಯಾದ ಒಂದು ದಿನದ ಬಳಿಕ ಪತ್ತೆಯಾಗಿತ್ತು. ರೆಡ್ ಲೈಟ್ ಆಸುಪಾಸಿನ ನಿವಾಸಿಗರು ಈ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಇದನ್ನು ಹೊರತುಪಡಿಸಿ ನೆರೆದಿದ್ದ ಜನರು ಸೇರಿ ಅಲ್ಲಿದ್ದ ದಲಿತ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿ, ಆಕೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿಸಿದ್ದರು. ಈ ವಿಚಾರವನ್ನು ಹಲವಾರು ಮಂದಿ ಖಂಡಿಸಿದ್ದರು.
ಸದ್ಯ 20 ಅಪರಾಧಿಗಳಲ್ಲಿ 7 ವರ್ಷ ಜೈಲು ಶಿಕ್ಷೆಗೊಳಗಾದವರಿಗೆ ತಲಾ 10 ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ