
ಬೆಂಗಳೂರು, [ಅ.31] : ಐದು ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕೊನೆ ಕ್ಷಣದಲ್ಲಿ ಮುಂದೂಡಲಾಗಿದೆ.
ಮಂಡ್ಯ, ರಾಮನಗರ, ಬಾಗಲಕೋಟೆ, ಬಳ್ಳಾರಿ ಶಿವಮೊಗ್ಗ ಉಪಚುನಾವಣೆ ಇರೋದ್ರಿಂದ ನೀತಿ ಸಂಹಿತೆ ಜಾರಿಲ್ಲಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ರಾಜ್ಯೋತ್ಸವ ಪ್ರಶಸ್ತಿಯನ್ನ ರದ್ದುಗೊಳಿಸಲಾಗಿದೆ.
ಇಂದು [ಬುಧವಾರ] ಗೃಹ ಕಚೇರಿ ಕೃಷ್ಣಾದಲ್ಲಿ 2018ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಂಬಂಧ ನಡೆಯಬೇಕಿದ್ದ ಸಭೆಯನ್ನ ಸಿಎಂ ಕುಮಾರಸ್ವಾಮಿ ರದ್ದುಗೊಳಿಸಿದ್ದಾರೆ.
ಕನ್ನಡಕ್ಕೆ ಕೊಡುಗೆ ನೀಡಿದವರನ್ನ ಗುರುತಿಸಿ ಪ್ರತಿವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಆದರೆ, ಇದೇ ಮೊದಲ ಬಾರಿ ಕನ್ನಡ ರಾಜ್ಯೋತ್ಸವ ದಿನದಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನವನ್ನು ಮುಂದೂಡಲಾಗಿದೆ.
ಚುನಾವಣೆ ಮುಗಿದ ಬಳಿಕ ಪ್ರಶಸ್ತಿ ಆಯ್ಕೆ ಸಮಿತಿ ಸಭೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.