
ನವದೆಹಲಿ: ಶೀಘ್ರಗತಿಯಲ್ಲಿ ಆರ್ಥಿಕ ಪ್ರಗತಿ ಸಾಧಿಸುತ್ತಿರುವ ಭಾರತ 2030ನೇ ಇಸ್ವಿ ವೇಳೆಗೆ ಜರ್ಮನಿ ಹಾಗೂ ಜಪಾನ್‌ನಂತಹ ಮುಂದುವರಿದ ದೇಶಗಳನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಎಚ್‌ಎಸ್‌ಬಿಸಿ ಹೋಲ್ಡಿಂಗ್ಸ್ ಪಿಎಲ್‌ಸಿ ಕಂಪನಿಯ ವರದಿ ತಿಳಿಸಿದೆ.
2030ರ ಹೊತ್ತಿಗೆ ಅಮೆರಿಕವನ್ನು ನಂ.1 ಸ್ಥಾನದಿಂದ ಕೆಳಗಿಳಿಸಲಿರುವ ಚೀನಾ, ಪ್ರಥಮ ಸ್ಥಾನಕ್ಕೆ ಏರಲಿದೆ. ಅಮೆರಿಕ ಎರಡನೇ ಸ್ಥಾನಕ್ಕೆ ಜಾರಲಿದೆ. ಭಾರತ ಮೂರನೇ ಸ್ಥಾನಕ್ಕೆ ಜಿಗಿಯಲಿದೆ. ಸದ್ಯ ಭಾರತ ಆರನೇ ಸ್ಥಾನದಲ್ಲಿದೆ ಎಂದು ವರದಿ ತಿಳಿಸಿದೆ.
2030ರ ವೇಳೆಗೆ ಚೀನಾದ ಆರ್ಥಿಕತೆ 1880 ಲಕ್ಷ ಕೋಟಿ ರು., ಅಮೆರಿಕದ್ದು 1820 ಲಕ್ಷ ಕೋಟಿ ರು. ಹಾಗೂ ಭಾರತದ್ದು 428 ಲಕ್ಷ ಕೋಟಿ ರು. ನಷ್ಟಿರಲಿದೆ ಎಂದು ವರದಿ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.