ಸರ್ಕಾರಕ್ಕೆ ಬಿಗ್ ಶಾಕ್ : ಬಯಲಾಯ್ತು ಮತ್ತೊಂದು ಸ್ಫೋಟಕ ಸಂಗತಿ?

Published : Sep 20, 2018, 11:29 AM ISTUpdated : Sep 20, 2018, 11:30 AM IST
ಸರ್ಕಾರಕ್ಕೆ ಬಿಗ್ ಶಾಕ್ : ಬಯಲಾಯ್ತು ಮತ್ತೊಂದು ಸ್ಫೋಟಕ ಸಂಗತಿ?

ಸಾರಾಂಶ

ರಮೇಶ್‌ ಜಾರಕಿಹೊಳಿ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನದಲ್ಲಿ ಮಹಾರಾಷ್ಟ್ರದ ಕಂದಾಯ ಸಚಿವ ಚಂದ್ರಕಾಂತ್‌ ಪಾಟೀಲ್‌ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿದುಬಂದ ಬೆನ್ನಲ್ಲೇ ಇದೀಗ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ. 

ಬೆಂಗಳೂರು :  ಕಾಂಗ್ರೆಸ್ಸಿನ ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನದಲ್ಲಿ ಮಹಾರಾಷ್ಟ್ರದ ಕಂದಾಯ ಸಚಿವ ಚಂದ್ರಕಾಂತ್‌ ಪಾಟೀಲ್‌ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿದುಬಂದ ಬೆನ್ನಲ್ಲೇ ಇದೀಗ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ. 

ರಾಜ್ಯದ ಒಟ್ಟು 22 ಶಾಸಕರು ಮುಂಬೈಗೆ ಶಿಫ್ಟ್ ಆಗುತ್ತಿದ್ದಾರೆ ಎಂದು ಹೇಳಲಾಗಿದೆ. ಈ 22 ಶಾಸಕರಿಗೂ ಕೂಡ ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಅವರೇ ಆತಿಥ್ಯ ನೀಡುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ 22 ಶಾಸಕರು ಉಳಿದುಕೊಳ್ಳಲು ಕೂಡ ಅವರು ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ.  

ಆದರೆ, ಇದು ಆಪರೇಷನ್ ಕಮಲವೋ..? ಅಥವಾ ಸಚಿವ ಸ್ಥಾನ ಹಾಗೂ ಡಿಸಿಎಂ ಸ್ಥಾನಕ್ಕಾಗಿ ನಡೆಯುತ್ತಿರೋ ಬಂಡಾಯವೋ ಬಂಡಾಯವೋ ಎನ್ನುವ ಪ್ರಶ್ನೆ ಮೂಡಿದೆ. 

ಮುಂಬೈಗೆ ತೆರಳುತ್ತಿರುವವರಲ್ಲಿ ಕಾಂಗ್ರೆಸ್ ನ 18 ಶಾಸಕರು, ಜೆಡಿಎಸ್ 2 ಶಾಸಕರು ಹಾಗೂ ಪಕ್ಷೇತರ 2 ಶಾಸಕರಿದ್ದಾರೆ ಎನ್ನುವ ಮಾಹಿತಿ ಸುವರ್ಣ ನ್ಯೂಸ್ ಡಾಟ್ ಕಾಂಗೆ ಲಭ್ಯವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಜಾನ್‌ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ ಕೈ-ಬಿಜೆಪಿ ನಡುವೆ ಗದ್ದಲ
ಶಿವಾನಂದ ಮಠದ ಸರಸ್ವತಿ ಸ್ವಾಮಿಯ ಕಾಮ ಪುರಾಣ; ಬೆತ್ತಲೆಯಾಗಿ ಎಣ್ಣೆ ಮಸಾಜ್ ಮಾಡಿಸ್ಕೊಂಡ!