
ರಾಜಸ್ತಾನ(ಮೇ.11): ಕಲ್ಯಾಣ ಮಂಟಪ ಕುಸಿದು 25 ಮಂದಿ ಮೃತಪಟ್ಟ ಘಟನೆ ರಾಜಸ್ತಾನದ ಭರತ್ಪುರ ಜಿಲ್ಲೆಯಲ್ಲಿ ನಡೆದಿದೆ.
ಸಾವೂರ್ ರಸ್ತೆಯಲ್ಲಿ ಅನ್ನಪೂರ್ಣ ಮ್ಯಾರೇಜ್ ಹಾಲ್'ನಲ್ಲಿ ಭಾರೀ ಬಿರುಗಾಳಿಗೆ ಮಂಟಪದ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ. ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಿರುವಾಗಲೇ ಬಿರುಗಾಳಿ ಬೀಸಿದೆ. ಇದರಿಂದ ರಕ್ಷಣೆ ಪಡೆಯಲು ಮಂಟಪದಲ್ಲಿದ್ದವರೆಲ್ಲ ಗೋಡೆಯ ಪಕ್ಕ ನಿಂತಿದ್ದು, ಒಮ್ಮೆಲೆ ಗೋಡೆ ಕುಸಿದಿದೆ. ಪರಿಣಾಮ ನಾಲ್ವರು ಮಕ್ಕಳು, 7 ಮಹಿಳೆಯರು ಸೇರಿ 25 ಮಂದಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ, ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
28 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳಲ್ಲಿ ಹೆಚ್ಚಿನವರು ಗಂಭೀರ ಸ್ಥಿತಿಯಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.