
ಭಟ್ಕಳ : ಪ್ರವಾಸಿಗರ ಟೆಂಪೋ ಟ್ರಾವಲರ್ ಮತ್ತು ಮಿನಿ ಬಸ್ ಮುಖಾಮುಖಿ ಡಿಕ್ಕಿಯಾಗಿ 25ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸಬ್ದತೆ ಕ್ರಾಸ್ ಬಳಿ ಅಪಘಾತವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಟೆಂಪೋ ಟ್ರಾವಲರ್ ನಲ್ಲಿ ಬೆಂಗಳೂರಿನಿಂದ ಬಂದ ಪ್ರವಾಸಿಗರು ಇಡಗುಂಜಿ, ಮುರುಡೇಶ್ವರಕ್ಕೆ ಪ್ರಯಾಣಿಸುತ್ತಿದ್ದರು. ಇನ್ನು ಮಿನಿ ಬಸ್ ನಲ್ಲಿದ್ದವರು ಭಟ್ಕಳ ಮಾರ್ಗವಾಗಿ ಸಿಗಂದೂರಿಗೆ ಪ್ರಯಾಣ ಬೆಳೆಸಿದ್ದರು.
ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡ ಮೂವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಭಟ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.