
ನವದೆಹಲಿ[ಜ.02] ಎಐಎಡಿಎಂಕೆ ಸದಸ್ಯರ ಅತಿರೇಕದ ವರ್ತನೆಗೆ ಬೇಸತ್ತ ಸ್ಪೀಕರ್ ಸುಮಿತ್ರಾ ಮಹಾಜನ್ 26 ಸಂಸದರನ್ನು ಅಮಾನತು ಮಾಡಿದ್ದಾರೆ.
ಮೇಕೆದಾಟು ಕಾಮಗಾರಿ ಕಾರ್ಯ ಯೋಜನೆಯ ವರದಿಯನ್ನು ಸಿದ್ಧಪಡಿಸಲು ಕೇಂದ್ರ ಸರಕಾರ ಅನುಮತಿ ನೀಡಿದ್ದಕ್ಕೆ ತಮಿಳುನಾಡು ಸಂಸದರು ವಿರೋಧ ವ್ಯಕ್ತಪಡಿಸಿ ಗಲಾಟೆಗೆ ಇಳಿದರು. ಇನ್ನು 5 ದಿನದ ಕಲಾಪಕ್ಕೆ ಈ ಅಮಾನತುಗೊಂಡ ಸದಸ್ಯರು ಹಾಜರಾಗುವಂತಿಲ್ಲ.
ಮೇಕೆದಾಟು ಡ್ಯಾಂ ನಿರ್ಮಿಸಿದರೆ ಏನೇನು ಮುಳುಗತ್ತೆ?
ವ್ಯಯವಾಗುತ್ತಿರುವ ನೀರು ಬಳಸಿಕೊಳ್ಳುವುದು ಮತ್ತು ಬೆಂಗಳೂರಿಗೆ ಕುಡಿಯುವ ನೀರು ತರುವ ಉದ್ದೇಶಿತ ಯೋಜನೆಗೆ ದಶಕಗಳ ಇತಿಹಾಸವಿದೆ. ಕೇಂದ್ರ ಸರಕಾರ ಈ ಬಗ್ಗೆ ವರದಿ ಸಿದ್ಧಮಾಡಿ ಎಂದು ಹೇಳಿರುವುದಕ್ಕೆ ತಮಿಳುನಾಡು ಕ್ಯಾತೆ ತೆಗೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.