
ಲಖನೌ: ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಅಪ್ಪಳಿಸಿದ ಧೂಳಿನ ಬಿರುಗಾಳಿ ಮತ್ತು ಮಿಂಚಿಗೆ 26 ಮಂದಿ ಬಲಿಯಾಗಿದ್ದಾರೆ. ಶುಕ್ರವಾರ ರಾತ್ರಿಯಿಂದ ಆರಂಭವಾಗಿರುವ ಧೂಳಿನ ಬಿರುಗಾಳಿ ಮತ್ತು ಮಿಂಚಿನಿಂದಾಗಿ ರಾಜ್ಯದ 11 ಜಿಲ್ಲೆಗಳು ತತ್ತರಿಸಿವೆ.
ಈ ನಡುವೆ, ಧೂಳಿನ ಬಿರುಗಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತತ್‌ಕ್ಷಣವೇ ಪರಿಹಾರ ಒದಗಿಸಬೇಕು. ಅಲ್ಲದೆ, ರಕ್ಷಣೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಆಯಾ ಜಿಲ್ಲಾಧಿಕಾರಿಗಳು ಕೈಗೊಳ್ಳಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿರ್ದೇಶಿಸಿದ್ದಾರೆ.
ಈ ನಡುವೆ, ಇಂಥದ್ದೇ ವಾತಾವರಣ ರಾಜ್ಯದ ಕೆಲವು ಪ್ರದೇಶಗಳಲ್ಲಿ ಭಾನುವಾರವೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.