
ನವದೆಹಲಿ(ಡಿ.21): ಉತ್ತರ ಕನ್ನಡ, ಬೆಳಗಾವಿ ಗಲಭೆಗಳ ಬೆನ್ನಲ್ಲೇ ಕರ್ನಾಟಕ ಕಳವಳಪಡಬೇಕಾದ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಕೋಮುಗಲಭೆಗಳ ಸಂಖ್ಯೆಯಲ್ಲಿ ಕರುನಾಡು ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ ಎಂದು ಖುದ್ದು ಕೇಂದ್ರ ಸರ್ಕಾರವೇ ಸಂಸತ್ತಿಗೆ ಮಾಹಿತಿ ನೀಡಿದೆ.
2014-2016ನೇ ಸಾಲಿನಲ್ಲಿ ಕರ್ನಾಟಕ 279 ಕೋಮು ಗಲಭೆಗಳಿಗೆ ಸಾಕ್ಷಿಯಾಗಿದೆ ಎಂದು ರಾಜ್ಯಸಭೆಗೆ ಸರ್ಕಾರ ಮಾಹಿತಿ ನೀಡಿದೆ. ಬಿಜೆಪಿ ಆಳ್ವಿಕೆಯ ಉತ್ತರಪ್ರದೇಶ 450 ಗಲಭೆ ಪ್ರಕರಣಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದ್ದರೆ, ಮತ್ತೊಂದು ಬಿಜೆಪಿ ಆಳ್ವಿಕೆಯ ರಾಜ್ಯ ಮಹಾರಾಷ್ಟ್ರ 270 ಪ್ರಕರಣಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಬಿಜೆಪಿ ಆಡಳಿತ ನಡೆಸುತ್ತಿರುವ ಮಧ್ಯಪ್ರದೇಶ (205) ಹಾಗೂ ರಾಜಸ್ಥಾನ (200) ನಂತರದ ಸ್ಥಾನದಲ್ಲಿವೆ ಎಂದು ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ.
ಬಿಹಾರ (197) ಆರು ಹಾಗೂ ಗುಜರಾತ್(182) ಏಳನೇ ಸ್ಥಾನ ಪಡೆದಿವೆ. ವಿಶೇಷ ಎಂದರೆ ಮೇಘಾಲಯ, ಗೋವಾ, ಮೀಜೋರಂ, ನಾಗಾಲ್ಯಾಂಡ್, ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶದಲ್ಲಿ ಕೋಮುಗಲಭೆಯೇ ಸಂಭವಿಸಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.