ಶೀಘ್ರವೇ ಮುಚ್ಚಲಿವೆ 28 ಸಾವಿರ ಸರ್ಕಾರಿ ಶಾಲೆಗಳು ?

By Kannadaprabha NewsFirst Published Jul 13, 2018, 7:16 AM IST
Highlights

ರಾಜ್ಯದಲ್ಲಿನ 28 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸಂಬಂಧ ಸದ್ಯದಲ್ಲಿಯೇ ತಜ್ಞರ, ಶಿಕ್ಷಣ ಕ್ಷೇತ್ರದ ಜನಪ್ರತಿನಿಧಿಗಳ ಸಭೆ ನಡೆಸಿ ಸಲಹೆ ಪಡೆದು ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

ವಿಧಾನ ಪರಿಷತ್‌ :  ರಾಜ್ಯದಲ್ಲಿನ 28 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸಂಬಂಧ ಸದ್ಯದಲ್ಲಿಯೇ ತಜ್ಞರ, ಶಿಕ್ಷಣ ಕ್ಷೇತ್ರದ ಜನಪ್ರತಿನಿಧಿಗಳ ಸಭೆ ನಡೆಸಿ ಸಲಹೆ ಪಡೆದು ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

ಬಜೆಟ್‌ ಮೇಲಿನ ಉತ್ತರ ಬಳಿಕ ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರದ ಕುರಿತು ಪರಿಷತ್‌ ಸದಸ್ಯರ ಗೊಂದಲಗಳನ್ನು ನಿವಾರಿಸಿದ ಮುಖ್ಯಮಂತ್ರಿಗಳು,ಅಧಿಕಾರಿಗಳು ನೀಡಿದ್ದ ಅಂಕಿ ಅಂಶಗಳ ಆಧಾರದ ಮೇಲೆ ಬಜೆಟ್‌ನಲ್ಲಿ ತಿಳಿಸಲಾಗಿದೆ. ಸರ್ಕಾರಿ ಶಾಲೆ ಮುಚ್ಚುವ ಬಗ್ಗೆ, ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಎಲ್ಲರ ಸಲಹೆ ಪಡೆದೇ ಮುಂದುವರಿಯುತ್ತೇವೆ. ಸಮ್ಮಿಶ್ರ ಸರ್ಕಾರವು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಸದಸ್ಯ ಅರುಣ್‌ ಶಹಾಪುರ ಅವರು, ಯಾವ ಲೆಕ್ಕದ ಆಧಾರದಲ್ಲಿ 28 ಸಾವಿರ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಜಿಲ್ಲಾವಾರು ಯಾವ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ಮಾಹಿತಿ ನೀಡಬೇಕು. ಸರ್ಕಾರಿ ಶಾಲೆಗಳನ್ನು ಮುಚ್ಚುವುದರಿಂದ ರಾಜ್ಯದ ಶಿಕ್ಷಣ ಕ್ಷೇತ್ರದ ಮೇಲಾಗುವ ಪರಿಣಾಮ ಏನು ಎಂಬ ಅರಿವಿದೆಯೇ ಎಂಬುದನ್ನು ಉತ್ತರಿಸಬೇಕು ಎಂದು ಒತ್ತಾಯಿಸಿದರು.

click me!