ರಾಜ್ಯದಲ್ಲಿ 28 ಸಾವಿರ ಸರ್ಕಾರಿ ಶಾಲೆಗಳು ಬಂದ್

Published : Jul 06, 2018, 09:55 AM IST
ರಾಜ್ಯದಲ್ಲಿ 28 ಸಾವಿರ ಸರ್ಕಾರಿ ಶಾಲೆಗಳು ಬಂದ್

ಸಾರಾಂಶ

ಒಂದು ಕಿಮೀ ವ್ಯಾಪ್ತಿಯಲ್ಲಿರುವ ಮತ್ತು ದಾಖಲಾತಿ ಕಡಿಮೆ ಇರುವ 28,847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ 8,530 ಸರ್ಕಾರಿ ಶಾಲೆಗಳೊಂದಿಗೆ ವಿಲೀನಗೊಳಿಸುವುದಾಗಿ ಪ್ರಕಟಿಸಿದೆ.   

ಬೆಂಗಳೂರು :  ಒಂದು ಕಿಮೀ ವ್ಯಾಪ್ತಿಯಲ್ಲಿರುವ ಮತ್ತು ದಾಖಲಾತಿ ಕಡಿಮೆ ಇರುವ 28,847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ 8,530 ಸರ್ಕಾರಿ ಶಾಲೆಗಳೊಂದಿಗೆ ವಿಲೀನಗೊಳಿಸುವುದಾಗಿ ಪ್ರಕಟಿಸಿದೆ. 

ಪ್ರಸ್ತುತ ಆಯವ್ಯಯದಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಕಟ್ಟಡಗಳ ದುರಸ್ತಿಗಾಗಿ 150 ಕೋಟಿ ರು.ಗಳನ್ನು ಒದಗಿಸಲಾಗುತ್ತದೆ. ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಈಗಾಗಲೇ ಇಂಗ್ಲಿಷ್ ಮಾಧ್ಯಮ ಆರಂಭಿಸಲಾಗಿದೆ. ಇದರ ಜತೆಗೆ, ಆರಂಭಿಕ ಹಂತದಲ್ಲಿ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಪ್ರಾಯೋ ಗಿಕ ಹಂತವಾಗಿ ಪೂರ್ವ ಪ್ರಾಥಮಿಕ  ತರಗತಿ (ಪ್ರಿಕೆಜಿ/ಎಲ್‌ಕೆಜಿ/ಯುಕೆಜಿ) ಆರಂಭಿ ಸಲಾಗುತ್ತದೆ.

ಶಾಲೆಗಳಲ್ಲಿ ಬಯೋಮೆಟ್ರಿಕ್

ಐದು ಕೋಟಿ ವೆಚ್ಚದಲ್ಲಿ ರಾಜ್ಯದ 48 ಸಾವಿರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಮತ್ತು ಮಕ್ಕಳ ಹಾಜರಾತಿ ನಿಗಾ ವಹಿಸಲು ಬಯೋಮೆಟ್ರಿಕ್ ಸಾಧನ ಅಳವಡಿಸಲಾಗುತ್ತದೆ. ಈ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಜಾರಿಗೊಳಿಸಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಳ ಮಾಡುವ ದೃಷ್ಟಿಯಿಂದ ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಆಯ್ದ 4100 ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸ್ಥಳಾಂತರಿಸಿ ‘ಬಾಲಸ್ನೇಹಿ ಕೇಂದ್ರ’ಗಳಾಗಿ ಬಲವರ್ಧಿಸಲಾಗುವುದು. ಹಂತ ಹಂತವಾಗಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದಾಗಿ ಪ್ರಕಟಿಸಿದೆ. 

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ತರಬೇತಿ ಕೇಂದ್ರಗಳಿಗೆ ಮೂಲ ಸೌಕರ್ಯ ಒದಗಿಸಿ ತರಬೇತಿ ಕೇಂದ್ರಗಳಾಗಿ ಬಲವರ್ಧಿ ಸುವುದಕ್ಕಾಗಿ ಐದು ಕೋಟಿ ರು. ಅನುದಾನ ಒದಗಿಸಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕ ಹೆಸರಲ್ಲಿ ಪ್ರತ್ಯೇಕ ರಾಜ್ಯವಾಗಲಿ: ಶಾಸಕ ರಾಜು ಕಾಗೆ ಆಗ್ರಹ
ಸಿಎಂ ಸಿದ್ದರಾಮಯ್ಯ ಹೇಳಿಕೆಯೇ ನಮಗೆ ಅಂತಿಮ ಮಾರ್ಗದರ್ಶನ: ಸಚಿವ ದಿನೇಶ್ ಗುಂಡೂರಾವ್