
ಅಮೃತಸರ, [ನ.18] : ಪಂಜಾಬ್ನ ಅಮೃತಸರದ ನಿರಂಕಾರಿ ಭವನದ ಮೇಲೆ ಅಪರಿಚಿತರು ಗ್ರೆನೇಡ್ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಮೂವರು ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಅಮೃತಸರದ ನಿರಂಕರಿ ಭವನದ ಮೇಲೆ ದಾಳಿ ನಡೆಸಿದ್ದು, ಬಳಿಕ ಫೈರಿಂಗ್ ನಡೆಸಿ ಪರಾರಿಯಾಗಿದ್ದಾರೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದಾರೆ. ಉಗ್ರರು ಸ್ಫೋಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಸುತ್ತಮುತ್ತ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ