ಸಾಗರದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಪಲ್ಟಿ : 3 ಸಾವು

Published : Apr 18, 2019, 08:24 AM IST
ಸಾಗರದಿಂದ ಬೆಂಗಳೂರಿಗೆ ಬರುತ್ತಿದ್ದ  ಬಸ್ ಪಲ್ಟಿ : 3 ಸಾವು

ಸಾರಾಂಶ

ಶಿವಮೊಗ್ಗದ ಸಾಗರದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಬಸ್ ಪಲ್ಟಿಯಾಗಿ ಮೂವರು ಸಾವಿಗೀಡಾಗಿದ್ದಾರೆ. 

ಶಿವಮೊಗ್ಗ :  ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.  ಸಾಗರದಿಂದ  ಬೆಂಗಳೂರಿಗೆ ಹೊರಟಿದ್ದ ಸೀಬರ್ಡ್ ಬಸ್ ಪಲ್ಟಿಯಾಗಿ ಮೂವರು ಸಾವಿಗೀಡಾಗಿದ್ದಾರೆ.   20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ಸಾಗರ ಸಮೀಪದ ಉಳ್ಳೂರು ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಕೀರ್ತನಾ, ಸುಜಾತ, ಚಿತ್ರದುರ್ಗ ಜಿಲ್ಲೆಯ ಮಹಮದ್ ಎಂದು ಗುರುತಿಸಲಾಗಿದೆ.  

ಬಸ್ ನಲ್ಲಿ ಸಿಲುಕಿಕೊಂಡಿದ್ದವರನ್ನು ಹೊರ ತೆಗೆಯಲಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಇದೇ ಮಾರ್ಗವಾಗಿ ಶಾಸಕ ಹರತಾಳು ಹಾಲಪ್ಪ ಅವರು ಆಗಮಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಬಿಜೆಪಿ ಕಾರ್ಯಕರ್ತರು ಕೂಡ ಸ್ಥಳದಲ್ಲಿ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. 

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳಕ್ಕೆ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯ ಕಾರು ತಡೆದು ಪತ್ನಿ-ಮಗನ ಅಪಹರಣ, ಚಿನ್ನ ದರೋಡೆ!
Indus Water Treaty dispute: ಆಪರೇಷನ್ ಸಿಂದೂರ್ ಬಳಿಕವೂ ಬುದ್ಧಿ ಕಲಿಯದ ಪಾಕ್; ಭಾರತಕ್ಕೆ ಮತ್ತೆ ನೇರ ಬೆದರಿಕೆ! (Video))