
ಬೆಂಗಳೂರು : ಕೇಂದ್ರದ ಮಾಜಿ ಸಚಿವ ಹಾಗೂ ವಿಧಾನಪರಿಷತ್ತಿನ ಹಾಲಿ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಹಲವು ಮುಖಂಡರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಪಕ್ಷದ ಕಚೇರಿಯಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಯತ್ನಾಳ ಅವರಲ್ಲದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್‌ನ ಮಲ್ಲಿಕಾರ್ಜುನ ಖೂಬಾ, ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಅನ್ವರಿ ಹಾಗೂ ಮಾಜಿ ಸಚಿವ ನಾಗಪ್ಪ ಸಾಲೋಣಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಗೆ ಬರಮಾಡಿಕೊಳ್ಳಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.