ರಾಜ್ಯ ನಾಯಕರಿಗೆ ಬಿಜೆಪಿ ಹೈ ಕಮಾಂಡ್ ಶಾಕ್ : ಡಿಸಿಎಂ ಹುದ್ದೆಗೆ ಅಚ್ಚರಿಯ ಹೆಸರು?

By Web DeskFirst Published Aug 26, 2019, 7:21 AM IST
Highlights

ರಾಜ್ಯದಲ್ಲಿ ಡಿಸಿಎಂ ಹುದ್ದೆ ಖಚಿತವಾಗಿದ್ದು ಅಚ್ಚರಿಯ ಹೆಸರು ಹುದ್ದೆಗೆ ಪ್ರಕಟಿಸಿ ರಾಜ್ಯ ನಾಯಕರಿಗೆ ಶಾಕ್ ನೀಡಲು ಹೈ ಕಮಾಂಡ್ ಮುಂದಾಗಿದೆ. 

ಬೆಂಗಳೂರು [ಆ.26]:  ಜಾತಿ ಸಮೀಕರಣದ ಜೊತೆಗೆ ಭವಿಷ್ಯದಲ್ಲಿ ಪಕ್ಷ ಸಂಘಟನೆಯ ಗುರಿ ಇರಿಸಿಕೊಂಡು ಬಿ.ಎಸ್ .ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಬಹುತೇಕ ಮೂವರು ಸಚಿವರಿಗೆ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ಪಕ್ಷದ ಹೈಕಮಾಂಡ್ ರಾಜ್ಯ ನಾಯಕರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ.

ಕೊನೆಯ ಕ್ಷಣದ ಬದಲಾವಣೆಗಳನ್ನು ಹೊರತು ಪಡಿಸಿದರೆ ಸದ್ಯಕ್ಕೆ ಲಭಿಸಿರುವ ಮಾಹಿತಿ ಅನುಸಾರ ಸಚಿವರಾದ ಗೋವಿಂದ ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಲಕ್ಷ್ಮಣ ಸವದಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಹೆಚ್ಚಾಗಿದೆ. ಸೋಮವಾರ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳುವ ನಿರೀಕ್ಷೆಯಿದೆ. 

ಈ ಮೂರು ಹೆಸರುಗಳು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನದಲ್ಲಿ ದ್ದವು. ಈಗ ಅದೇ ಮೊದಲ ಮೂರು ಹೆಸರುಗಳನ್ನೇ ಉಪ ಮುಖ್ಯಮಂತ್ರಿಗಳನ್ನಾಗಿ ಮಾಡಲು ಬಿಜೆಪಿ ಹೈಕಮಾಂಡ್ ಮತ್ತು ಸಂಘ ಪರಿವಾರ ಒಲವು ತೋರಿದೆ. ಪ್ರಮಾಣವಚನ ಸ್ವೀಕರಿಸುವ ಪಟ್ಟಿ ತಯಾರಿಸುವ ವೇಳೆಯೇ ಈ ಬಗ್ಗೆ ಚರ್ಚೆ ನಡೆಸಲಾಗಿತ್ತು ಎನ್ನಲಾಗಿದೆ. ಈ ನೇಮಕದಿಂದ ಮುಂದೆ ಏನು ಬೇಕಾದರೂ ಬೆಳವಣಿಗೆ ನಡೆಯಲಿ, ಎದುರಿಸೋಣ ಎಂಬ ಗಟ್ಟಿ ನಿಲವಿಗೆ ವರಿಷ್ಠರು ಬಂದಂತಿದೆ.

ಆರಂಭದಲ್ಲಿ ಉಪಮುಖ್ಯಮಂತ್ರಿ ಬೇಡ ಎಂಬ ಭಾವನೆ ವ್ಯಕ್ತಪಡಿಸಿದ್ದ ಪಕ್ಷದ ವರಿಷ್ಠರು ಇದೀಗ ದಲಿತ, ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಮುಂದಾದಲ್ಲಿ ವಾಲ್ಮೀಕಿ ಸಮುದಾಯ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎಂಬುದು ಕುತೂಹಲಕರವಾ ಗಿದೆ. ಆ ಸಮುದಾಯದ ಬಿ.ಶ್ರೀರಾಮುಲು ಹಾಗೂ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು ಉಪ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. 

ಪರಿಶಿಷ್ಟ ಜಾತಿ ಸಮುದಾಯದ ಪ್ರಭಾವಿ ಹಾಗೂ ಸಜ್ಜನ ರಾಜಕಾರಣಿ ಎಂಬ ಹೆಸರು ಗಳಿಸಿರುವ ಹಿರಿಯ ಸಚಿವ ಗೋವಿಂದ ಕಾರಜೋಳ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಪಕ್ಷದಲ್ಲಿ ಯಾವುದೇ ಅಪಸ್ವರ ಇದ್ದಂತಿಲ್ಲ. ಆದರೆ, ಇದೇ ಮಾತು ಒಕ್ಕಲಿಗ ಸಮುದಾಯದ ಡಾ.ಅಶ್ವತ್ಥನಾರಾಯಣ ಹಾಗೂ ಲಿಂಗಾಯತ ಸಮುದಾ ಯದ ಲಕ್ಷ್ಮಣ ಸವದಿ ಅವರ ಬಗ್ಗೆ ಹೇಳುವಂತಿಲ್ಲ. 

ಈ ಪೈಕಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಸವದಿ ಅವರಿಗೆ ಸಚಿವ ಸ್ಥಾನ ನೀಡಿರುವುದಕ್ಕೇ ಪಕ್ಷದ ಆಂತರಿಕ ವಲಯದಲ್ಲಿ ತೀವ್ರ ಪ್ರತಿರೋಧ ಕಂಡು ಬಂದಿತ್ತು. ಇದೀಗ ಗಾಯದ ಮೇಲೆ ಬರೆ ಎನ್ನುವಂತೆ ಉಪಮುಖ್ಯಮಂತ್ರಿ ಸ್ಥಾನ ನೀಡಿದಲ್ಲಿ ಆಕಾಂಕ್ಷಿ ಶಾಸಕರ ಅಸಮಾಧಾನ ಭುಗಿಲೇಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ್ ಮೊದಲಾದ ಲಿಂಗಾಯತಸಮುದಾಯಕ್ಕೆ ಸೇರಿದ ಹಿರಿಯ ಸಚಿವರಿದ್ದಾರೆ. ಉಮೇಶ್ ಕತ್ತಿ, ಬಸನಗೌಡ ಪಾಟೀಲ ಯತ್ನಾಳ, ಮುರುಗೇಶ್ ನಿರಾಣಿ, ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರವೀಂದ್ರ ನಾಥ್, ದತ್ತಾತ್ರೇಯ ಪಾಟೀಲ ರೇವೂರು ಮೊದಲಾದ ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ಅಸಮಾಧಾಗೊಳ್ಳುವ ಸಾಧ್ಯತೆಯಿದೆ. ಇದೇ ಮಾತು ಡಾ.ಅಶ್ವತ್ಥನಾರಾಯಣ ಅವರಿಗೂ ಅನ್ವಯವಾಗುತ್ತದೆ. ಮೊದಲ ಬಾರಿಗೆ ಸಚಿವ ಸ್ಥಾನದ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನವನ್ನೂ ನೀಡಿದಲ್ಲಿ ಆ ಸಮುದಾಯದ ಹಿರಿಯ ಶಾಸಕರಾದ ಆರ್. ಅಶೋಕ್, ಸಿ.ಟಿ.ರವಿ ಮೊದಲಾದವರಿಗೆ ಹಿನ್ನೆಡೆ ಸಂಭವಿಸಿದಂತಾಗುತ್ತದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಒಲವಿಲ್ಲ ದಿದ್ದರೂ ವರಿಷ್ಠರು ಡಿಸಿಎಂ ಹುದ್ದೆ ಸೃಷ್ಟಿ ಆಗಲೇಬೇಕು ಎಂಬ ದೃಢ ನಿರ್ಧಾರ ಕೈಗೊಂಡಿದ್ದಾರೆ. ಯಡಿಯೂರಪ್ಪ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅಶ್ವತ್ಥ ನಾರಾಯಣ ಮತ್ತು ಲಕ್ಷ್ಮಣ ಸವದಿ ಅವರಿಗೆ ಡಿಸಿಎಂ ಸ್ಥಾನ ನೀಡುವುದರಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ವಿವರಿಸಿದ್ದಾರೆ. ಆದರೆ, ಅದನ್ನು ನಾವು ನೋಡಿಕೊಳ್ಳು ತ್ತೇವೆ ಎಂಬ ಖಡಕ್ ಮಾತು ವರಿಷ್ಠರಿಂದ ಹೊರಬಿದ್ದಿದೆ ಎನ್ನಲಾಗಿದೆ. 

click me!