ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಪುಲ್ವಾಮಾ[ಫೆ.18]: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಯೋಧರು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಈ ಮಾಹಿತಿಯನ್ನು ಸೇನಾ ಮೂಲಗಳು ಖಚಿತಪಡಿಸಿದ್ದಾರೆ. ಪುಲ್ವಾಮಾದ ಪಿಂಗಲಾನ್ ಪ್ರದೇಶದಲ್ಲಿ ರಾತ್ರಿ ಸುಮಾರು 12 ಗಂಟೆಗೆ ಆರಂಭವಾಗಿದ್ದ ಈ ಫೈರಿಂಗ್ ಮಧ್ಯರಾತ್ರಿ 1.30ರವರೆಗೆ ಮುಂದುವರೆದಿತ್ತು. ಈ ವೇಳೆ ಕೆಲ ಯೋಧರಿಗೆ ಗಾಯಗಳಾಗಿದ್ದು, ಓರ್ವ ನಾಗರಿಕನೂ ಸಾವನ್ನಪ್ಪಿದ್ದಾರೆ. ದಾಳಿ ನಡೆಸಿದ ಬಳಿಕ ಅವಿತುಕೊಂಡಿದ್ದ ಉಗ್ರರು ಪರಾರಿಯಾಗಿದ್ದಾರೆನ್ನಲಾಗಿದೆ. ಸದ್ಯ ಈ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ.
Visuals: The 4 Army personnel including a Major, who were killed in action during encounter between terrorists and security forces, in Pinglan area of Pulwama district, belonged to 55 Rashtriya Rifles. (Visuals deferred by unspecified time) pic.twitter.com/Wa2sxz3bzT
— ANI (@ANI)ಫೆ. 17ರಂದು ಲ್ವಾಮಾದ ಪಿಂಗಲಾನ್ ಪ್ರದೇಶದಲ್ಲಿ ಮೂವರು ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಸೇನೆಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ಆರಂಭಿಸಿದ್ದ ಭದ್ರತಾ ಪಡೆ ಇಡೀ ಪ್ರದೇಶವನ್ನು ಸುತ್ತುವರೆದಿತ್ತು. ಆದರೆ ಇದನ್ನರಿತ ಉಗ್ರರು ಯೋಧರ ಮೇಲೆ ಫೈರಿಂಗ್ ನಡೆಸಿದ್ದಾರೆ. ಉಗ್ರರ ಈ ದಾಳಿಗೆ ಪ್ರತಿಯಾಗಿ ಭಾರತೀಯ ಸೇನಾಪಡೆಯು ಪ್ರತಿ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಗ್ರರು ಹಾಗೂ ಯೋಧರ ನಡುವಿನ ಈ ಫೈರಿಂಗ್ ಇನ್ನೂ ಮುಂದುವರೆದಿದೆ ಎನ್ನಲಾಗಿದೆ.
ಹುತಾತ್ಮ ಅಧಿಕಾರಿ ಹಾಗೂ ಯೋಧರು ಭಾರತೀಯ ಸೇನೆಯ 55 ರಾಷ್ಟ್ರೀಯ ರೈಫಲ್ಸ್ ಪಡೆಗೆ ಸೇರಿದವರಾಗಿದ್ದಾರೆ. ಯೋಧರು ಹಾಗೂ ಉಗ್ರರ ನಡುವೆ ಫೈರಿಂಗ್ ಮುಂದುವರೆದಿದ್ದು, ಶೋಧ ಕಾರ್ಯ ಮುಂದುವರೆದಿದೆ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.