
ಬೆಂಗಳೂರು(ಅ.16): ಗ್ಯಾಸ್ ಸಿಲಿಂಡರ್ ಸ್ಫೋಟಿಸಿ 6 ಮನೆಗಳು ಕುಸಿದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಈಜಿಪುರದಲ್ಲಿ ನಡೆದಿದ್ದು, ಈ ಘಟನೆ ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿತ್ತು. ಘಟನೆಯ ಬೆನ್ನಲ್ಲೇ ಅವಶೇಷಗಳಡಿ ಸಿಕ್ಕವರ ರಕ್ಷಣಾ ಕಾರ್ಯವೂ ಆರಂಭವಾಗಿಯತ್ತು. ಇದೀಗ ಕಟ್ಟಡದಡಿಯಲ್ಲಿ ಸಿಲುಕಿದ್ದ 3 ವರ್ಷದ ಸಂಜನಾ ಹೆಸರಿನ ಮಗುವನ್ನು ಜೀವಂತವಾಗಿ ಹೊರತೆಗೆಯುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿದೆ.
ಇಂದು ಬೆಳಗ್ಗೆ 6 30. ಕ್ಕೆ ಸಿಲಿಂಡರ್ ಸ್ಫೋಟಗೊಂಡು 6 ಮನೆಗಳು ಕುಸಿದಿತ್ತು. ಈ ಘಟನೆಯಲ್ಲಿ ಎಂಟು ತಿಂಗಳ ಗರ್ಭಿಣಿ ಸೇರಿದಂತೆ ಒಟ್ಟು 5 ಮಂದಿ ಸಾವನ್ನಪ್ಪಿದ್ದರು. ಅಲ್ಲದೆ ಮೂವರು ಅವಶೇಷಗಳಡಿ ಸಿಲುಕಿದ್ದರು. ಇವರಿಗಾಘಿ ರ್ಷಣಾ ಕಾರ್ಯ ರಂಭಿಸಿದ್ದು, ಸಂಜನಾ ಎಂಬ ಮೂರು ವರ್ಷದ ಬಾಲಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮೃತರನ್ನು ಕಲಾವತಿ(68), ರವಿಚಂದ್ರನ್(46), ಹರಿಪ್ರಸಾದ್(19), ಪವನ್ ಕಲ್ಯಾಣ(19), ಅಶ್ವಿನಿ (ಗರ್ಭಿಣಿ) ಎಂದು ಗುರುತಿಸಲಾಗಿತ್ತು. ಸ್ಥಳಕ್ಕೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.