
ನವದೆಹಲಿ : ಮಿನಿ ಬಸ್ ವೊಂದು ಸುಮಾರು 60 ಅಡಿ ಆಳದ ಭಾರೀ ಕಂದಕಕ್ಕೆ ಉರುಳಿ ಬಿದ್ದು 30 ಮಂದಿ ದುರ್ಮರಣವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಉತ್ತರಾಖಂಡದ ಪಿಪಲಿ - ಬೋನ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ರಾಮನಗರದಿಂದ ಬೋನ್ ಪ್ರದೇಶದಲ್ಲಿ ತೆರಳುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ 30 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
ಸ್ಥಳಕ್ಕೆ ಎನ್ ಡಿ ಆರ್ ಎಫ್ ಪಡೆ ಆಗಮಿಸಿದ್ದು, ಕಾರ್ಯಾಚಾರಣೆಯಲ್ಲಿ ತೊಡಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಈ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.