
ನವದೆಹಲಿ. [ಅ,05] : ಎಲ್ಲದಕ್ಕೂ ಒಂದು ಮಿತಿಯಿರುತ್ತದೆ. ಅತಿಯಾದರೆ ಪರಿಣಾಮ ಎದುರಿಸಬೇಕಾಗುತ್ತದೆ. ಇದಕ್ಕೆ ಉದಾರಹಣೆ ಎಂಬಂತೆ 31 ವರ್ಷದ ವ್ಯಕ್ತಿಯೊಬ್ಬರು ಲೈಂಗಿಕ ತೃಪ್ತಿಯಾಗಿ ಹೆಚ್ಚು ವಯಾಗ್ರ ಸೇವಿಸಿ, ದೃಷ್ಟಿ ಕಳೆದುಕೊಕೊಂಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ವ್ಯಕ್ತಿಯೊಬ್ಬರು ಆನ್‍ಲೈನ್ ಮೂಲಕ ವಯಾಗ್ರ ಖರೀದಿಸಿದ್ದು, ನಿತ್ಯವೂ 50 ಗ್ರಾಂ ಗಿಂತ ಹೆಚ್ಚಿನ ಪ್ರಮಾಣದಲ್ಲಿ ವಯಾಗ್ರಾ ಸೇವಿಸಿದ್ದಾರೆ. ಹೀಗಾಗಿ ಅವರು ದೃಷ್ಟಿ ದೋಷದಿಂದ ಬಳಲುವ ಪರಿಸ್ಥಿತಿ ಎದುರಾಗಿದೆ.
ವಸ್ತುಗಳು ಮಂಜು ಮಂಜಾಗಿ ಕಾಣಿಸಲು ಪ್ರಾರಂಭಿಸಿದ್ದು, ಇದರಿಂದ ಭಯಗೊಂಡಿದ್ದಾನೆ. ಕೂಡಲೇ ವೈದ್ಯರನ್ನು ಭೇಟಿಯಾಗಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ತಪಾಸಣೆಗೆ ಒಳಪಡಿಸಿ ವೈದ್ಯರು, ಅತಿಯಾದ ವಯಾಗ್ರ ಸೇವನೆ ಮಾಡಿದ್ದೆ ಈ ಸಮಸ್ಯೆಗೆ ಕಾರಣ ಎಂದು ಖಚಿತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.