ಫ್ರಾನ್ಸ್ ನಿಂದ ಭಾರತ 36 ರಫೇಲ್‌ ವಿಮಾನ ಖರೀದಿ?

Published : Sep 23, 2019, 09:10 AM IST
ಫ್ರಾನ್ಸ್ ನಿಂದ ಭಾರತ 36 ರಫೇಲ್‌ ವಿಮಾನ ಖರೀದಿ?

ಸಾರಾಂಶ

ಫ್ರಾನ್ಸ್‌ನಿಂದ 36 ರಫೇಲ್‌ ಯುದ್ಧ ವಿಮಾನಗಳನ್ನು ಖರೀದಿಸಲು ಭಾರತ ಒಪ್ಪಂದ ಮಾಡಿಕೊಂಡಿದ್ದು, ಅದರಲ್ಲಿ ಹಗರಣ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸುವುದರೊಂದಿಗೆ ಭಾರಿ ಸಂಚಲನಕ್ಕೆ ಕಾರಣವಾಗಿತ್ತು. ಆದರೆ ಇದೀಗ ಮತ್ತೆ ವಿಮಾನಗಳ ಖರೀದಿಗೆ ಭಾರತ ಮುಂದಾಗಿದೆ ಎನ್ನಲಾಗುತ್ತಿದೆ. 

ನವದೆಹಲಿ [ಸೆ.23]: ಫ್ರಾನ್ಸ್‌ನಿಂದ ಖರೀದಿಸುತ್ತಿರುವ 36 ರಫೇಲ್‌ ಯುದ್ಧ ವಿಮಾನಗಳ ಪೈಕಿ ಮೊದಲನೆಯದ್ದು ಅ.8ರಂದು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರವಾಗುತ್ತಿರುವಾಗಲೇ, ಇನ್ನೂ 36 ರಫೇಲ್‌ ಯುದ್ಧ ವಿಮಾನಗಳನ್ನು ಖರೀದಿಸುವ ಪ್ರಸ್ತಾವವನ್ನು ನರೇಂದ್ರ ಮೋದಿ ಸರ್ಕಾರ ಅಂತಿಮಗೊಳಿಸಿದೆ ಎಂದು ಹೇಳಲಾಗಿದೆ. ಈ ಕುರಿತಾದ ಒಪ್ಪಂದಕ್ಕೆ 2020ರ ಆರಂಭದಲ್ಲಿ ಸಹಿ ಬೀಳಲಿದೆ ಎಂದು ವರದಿಗಳು ತಿಳಿಸಿವೆ.

ಫ್ರಾನ್ಸ್‌ನಿಂದ 36 ರಫೇಲ್‌ ಯುದ್ಧ ವಿಮಾನಗಳನ್ನು ಖರೀದಿಸಲು ಭಾರತ ಒಪ್ಪಂದ ಮಾಡಿಕೊಂಡಿದ್ದು, ಅದರಲ್ಲಿ ಹಗರಣ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸುವುದರೊಂದಿಗೆ ಭಾರಿ ಸಂಚಲನಕ್ಕೆ ಕಾರಣವಾಗಿತ್ತು. 36 ವಿಮಾನಗಳ ಪೈಕಿ ಮೊದಲನೆಯದ್ದನ್ನು ಡಸಾಲ್ಟ್‌ ಏವಿಯೇಷನ್‌ ಕಂಪನಿ ವಾಯುಪಡೆಗೆ ಹಸ್ತಾಂತರ ಮಾಡಿದೆ. ಅ.8ರಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಸಮ್ಮುಖ ಅಧಿಕೃತ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ.

ಇದೀಗ ಇನ್ನೂ 36 ಯುದ್ಧ ವಿಮಾನಗಳನ್ನು ಖರೀದಿಸಲು ಭಾರತ ಉದ್ದೇಶಿಸಿದ್ದು, ಇದರೊಂದಿಗೆ ಭಾರತೀಯ ವಾಯುಪಡೆಯಲ್ಲಿನ ಬತ್ತಳಿಕೆ ಸೇರುವ ರಫೇಲ್‌ ವಿಮಾನಗಳ ಸಂಖ್ಯೆ 72ಕ್ಕೇರಿಕೆಯಾಗಲಿದೆ. ಏತನ್ಮಧ್ಯೆ, ರಫೇಲ್‌ ಬದಲಿಗೆ ಲಾಕ್‌ಹೀಡ್‌ ಮಾರ್ಟಿನ್‌ ಕಂಪನಿಯ ಯುದ್ಧ ವಿಮಾನಗಳನ್ನು ಖರೀದಿಸುವಂತೆ ಭಾರತದ ಮೇಲೆ ಅಮೆರಿಕ ಒತ್ತಡ ಹೇರುತ್ತಿದೆ ಎಂದು ಹೇಳಲಾಗಿದೆ. ಆದರೆ ಪಾಕಿಸ್ತಾನದ ಎಫ್‌-16 ಯುದ್ಧ ವಿಮಾನವನ್ನು ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ತಮಾನ್‌ ಅವರು ಹೊಡೆದುರುಳಿಸುವುದರೊಂದಿಗೆ ಅಮೆರಿಕ ವಿಮಾನಯಾನ ಕಂಪನಿಯ ಪ್ರತಿಷ್ಠೆ ಕುಂದುಂಟಾಗಿದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಸೀಸ್‌ನಲ್ಲಿ ಮಕ್ಕಳಿಗೆ ಜಾಲತಾಣ ಬಳಕೆ ನಿಷೇಧ : ನಾಳೆಯಿಂದ ಜಾರಿ
ನಿಮ್ಮ ಪತ್ನಿ ಭಾರತಕ್ಕೆ ಕಳಿಸಿ : ವ್ಯಾನ್ಸ್‌ಗೆ ವಲಸಿಗರ ಟಾಂಗ್‌