
ಪಲು(ಸೆ.29): ಇಂಡೊನೇಷ್ಯಾದ ಸುಲಾವೇಸಿ ದ್ವೀಪದ ಪಲು ನಗರದಲ್ಲಿ ಸಂಭವಿಸಿದ ಪ್ರಬಲ ಭೂಕಂಪ ಮತ್ತು ಸುನಾಮಿ ಹೊಡೆತಕ್ಕೆ ಸಿಲುಕಿ ಸುಮಾರು 384 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸುಲಾವೆಸಿ ದ್ವೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ಮಾಪನದಲ್ಲಿ 7.5 ತೀವ್ರತೆ ದಾಖಲಾಗಿದೆ.
ಭೂಕಂಪನದಿಂದ ಸಮುದ್ರ ನೀರು ದ್ವೀಪವನ್ನು ಆವರಿಸಿದ್ದು, ಸುನಾಮಿಯ ಪರಿಸ್ಥಿತಿ ನಿರ್ಮಾಣವಾಗಿದೆ. ಸುಮಾರು 384 ಜನ ಸಾವನ್ನಪ್ಪಿದ್ದು, ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಆಸ್ಪತ್ರೆಗಳು ಗಾಯಾಳುಗಳಿಂದ ತುಂಬಿ ಹೋಗಿವೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ಜನನಿಬಿಡ ಪ್ರದೇಶಗಳಲ್ಲಿ, ರಸ್ತೆ ಬದಿಗಳಲ್ಲಿ ಶವಗಳ ಸಾಲು ಕಂಡು ಬರುತ್ತಿದೆ. ಇನ್ನು ಭೂಕಂಪನ ವೇಳೆ ಸಮುದ್ರ ಅಲೆಗಳು 5 ಅಡಿಗಳಷ್ಟು ಎತ್ತರದವರೆಗೂ ಅಪ್ಪಳಿಸಿವೆ.
ಸುಲಾವೆಸಿ ದ್ವೀಪದಲ್ಲಿ ಮೂರುವರೆ ಲಕ್ಷ ಜನ ನೆಲೆಸಿದ್ದಾರೆ. ಬೀಚ್ ಫೆಸ್ಟಿವಲ್ಸಂಭ್ರಮದಲ್ಲಿದ್ದ ನಾಗರಿಕರು ಸಾವಿನ ಮನೆ ಸೇರಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
7.5ರ ತೀವ್ರತೆಯಲ್ಲಿ ಭಾರೀ ಭೂಕಂಪ, ಸುನಾಮಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.