ಮಧ್ಯಪ್ರದೇಶ: ನಾಲ್ವರು ಬಿಜೆಪಿ ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿ?

Published : Jul 26, 2019, 10:48 AM ISTUpdated : Jul 26, 2019, 11:04 AM IST
ಮಧ್ಯಪ್ರದೇಶ: ನಾಲ್ವರು ಬಿಜೆಪಿ ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿ?

ಸಾರಾಂಶ

ಬಿಜೆಪಿಗೆ ಆಘಾತಕಾರಿ ಸುದ್ದಿಯೊಂದು ಹರಿದಾಡುತ್ತಿದೆ. ಕಳೆದ ಎರಡು ದಿನಗಳ ಹಿಂದೆ ಮಧ್ಯಪ್ರದೇಶದಲ್ಲಿ ಇಬ್ಬರು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಮತ್ತೆ ನಾಲ್ವರು ಕೈ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. 

ಭೋಪಾಲ್‌ [ಜು.26]: ಅಪರಾಧ ಮಸೂದೆ ತಿದ್ದುಪಡಿ ಮಸೂದೆ ಮೇಲಿನ ಮತದಾನ ಪ್ರಕ್ರಿಯೆಯಲ್ಲಿ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್‌ ಸರ್ಕಾರ ಬೆಂಬಲಿಸಿದ ಬೆನ್ನಲ್ಲೇ, ರಾಜ್ಯದ ಇನ್ನೂ ನಾಲ್ವರು ಬಿಜೆಪಿ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸ್ವಯಂ ಘೋಷಿತ ದೇವಮಾನವ ಹಾಗೂ ಕಂಪ್ಯೂಟರ್‌ ಬಾಬಾ ಖ್ಯಾತಿಯ ನಾಮ್‌ದೇವ್‌ ತ್ಯಾಗಿ ಹೊಸ ಬಾಂಬ್‌ ಹಾಕಿದ್ದಾರೆ. ಆದರೆ, ಅವರ ಹೆಸರುಗಳು ಸೇರಿದಂತೆ ಇನ್ನಿತರ ಯಾವುದೇ ಮಾಹಿತಿಗಳನ್ನು ತ್ಯಾಗಿ ಬಹಿರಂಗಪಡಿಸಲಿಲ್ಲ.

ಮಧ್ಯಪ್ರದೇಶ ಬಿಜೆಪಿ ನಾಯಕತ್ವದ ವಿರುದ್ಧ ಹಲವು ಶಾಸಕರು ಅಸಮಾಧಾನ ಹೊಂದಿದ್ದು, ಅವರೆಲ್ಲರೂ ತಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಮುಖ್ಯಮಂತ್ರಿ ಕಮಲ್‌ನಾಥ್‌ ಭೇಟಿ ಬಳಿಕ ತಮ್ಮ ಜೊತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಹೆಸರುಗಳನ್ನು ಬಹಿರಂಗಪಡಿಸುವುದಾಗಿ ಹೇಳಿದರು. ಆದರೆ, ರಾಜ್ಯ ಬಿಜೆಪಿ ಒಗ್ಗಟ್ಟಾಗಿದ್ದು, ಯಾವುದೇ ಗುಂಪುಗಾರಿಕೆಯಿಲ್ಲ. ಎಲ್ಲವೂ ನಮ್ಮ ನಿಯಂತ್ರಣದಲ್ಲೇ ಇದೆ. ಏನೂ ಆಗಿಯೇ ಇಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ರಾಕೇಶ್‌ ಸಿಂಗ್‌ ಸ್ಪಷ್ಟನೆ ನೀಡಿದ್ದಾರೆ.

ಈ ಹಿಂದೆ ಶಿವರಾಜ್‌ ಸಿಂಗ್‌ ಚೌಹಾಣ್‌ ಸರ್ಕಾರದಲ್ಲಿ ಸಚಿವರಾಗಿದ್ದ ತ್ಯಾಗಿ ಅವರನ್ನು ಇದೀಗ ಕಮಲ್‌ನಾಥ್‌ ಸರ್ಕಾರ, ಮಾ ನರ್ಮದಾ, ಮಾ ಕ್ಷಿಪ್ರ ಹಾಗೂ ಮಾ ಮಂದಾಕಿನಿ ನದಿ ಟ್ರಸ್ಟ್‌ನ ಅಧ್ಯಕ್ಷರನ್ನಾಗಿ ನೇಮಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್
ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು