
ನವದೆಹಲಿ[ನ. 18] ಸಿಯಾಚಿನ್ ನಲ್ಲಿ ಮತ್ತೆ ಹಿಮಪಾತದ ಆತಂಕ ಕಂಡುಬಂದಿದೆ. ಸಿಯಾಚಿನ್ ಹಿಮಪ್ರದೇಶದಲ್ಲಿ ಇಂದು ಮಧ್ಯಾಹ್ನ ಹಿಮಪಾತವಾದ ಕಾರಣ ನಾಲ್ವರು ವೀರ ಯೋಧರು, ಇಬ್ಬರು ಸ್ಥಳೀಯರು ಸೇರಿದಂತೆ 6 ಜನ ಮೃತಪಟ್ಟಿದ್ದಾರೆ.
ಮಧ್ಯಾಹ್ನ ಭಾರೀ ಹಿಮಪಾತವಾದ ಕಾರಣ 8 ಜನ ಸೈನಿಕರು ಹಿಮದಡಿ ಸಿಲುಕಿಕೊಂಡಿದ್ದರು. ಶೋಧ ಕಾರ್ಯವನ್ನು ಆಗಲೇ ಕೈಗೆತ್ತಿಕೊಳ್ಳಲಾಗಿತ್ತು.
ಸಿಯಾಚಿನ್ನ 18 ಸಾವಿರ ಅಡಿ ಎತ್ತರದ ಹಿಮಶ್ರೇಣಿಯಲ್ಲಿ ಸೋಮವಾರ ಮಧ್ಯಾಹ್ನ 3.30ರ ವೇಳೆಗೆ ಹಿಮಪಾತ ಸಂಭವಿಸಿತ್ತು. ಹಿಮದಡಿ ಸಿಲುಕಿರುವ ಸೈನಿಕರ ರಕ್ಷಣಾ ಕಾರ್ಯಾಚರಣೆ ಮುಕ್ತಾಯವಾಗಿದ್ದು 4 ಜನ ಸೈನಿಕರನ್ನು ರಕ್ಷಣೆ ಮಾಡಲು ಮಾತ್ರ ಸಾಧ್ಯವಾಗಿದೆ. ಗಂಭೀರ ಗಾಯಗೊಂಡಿರುವವರನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ.
ನೆನೆ ನೆನೆ ಹನುಮಂತಪ್ಪ ಕೊಪ್ಪದ್ ಅವರನ್ನ
2016ರ ಹನುಮಂತಪ್ಪ ಪ್ರಕರಣದ ಕಹಿ ನೆನಪು: 2016ರಲ್ಲಿ ಸಿಯಾಚಿನ್‍ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿ ಕರ್ನಾಟಕದ ಯೋಧ ಹನುಮಂತಪ್ಪ ಕೊಪ್ಪದ್ 6 ದಿನಗಳ ಬಳಿಕ ಪತ್ತೆಯಾಗಿದ್ದರು. ಅವರನ್ನು ಜೀವಂತವಾಗಿ ಪತ್ತೆ ಮಾಡಿದ್ದರೂ ಬಹು ಅಂಗಾಂಗ ವೈಫಲ್ಯದಿಂದ ಸಾವಿಗೀಡಾಗಿದ್ದರು. ಜೀವನ್ಮರಣ ಹೋರಾಟ ನಡೆಸಿದ್ದ ವೀರಯೋಧ ಹನುಮಂತಪ್ಪ ಕೊಪ್ಪದ್ ಅವರಿಗೆಮರಣೋತ್ತರ ಶೌರ್ಯ ಪ್ರಶಸ್ತಿ ನೀಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.