ಬಾವಿಯಲ್ಲಿ 4 ಅಪರಿಚಿತ ಶವ ಪತ್ತೆ: ಬೆಚ್ಚಿ ಬಿದ್ದ ಗ್ರಾಮಸ್ಥರು!

Published : Jul 12, 2018, 02:27 PM ISTUpdated : Jul 12, 2018, 04:09 PM IST
ಬಾವಿಯಲ್ಲಿ 4 ಅಪರಿಚಿತ ಶವ ಪತ್ತೆ: ಬೆಚ್ಚಿ ಬಿದ್ದ ಗ್ರಾಮಸ್ಥರು!

ಸಾರಾಂಶ

ಬಾವಿಯಲ್ಲಿ ನಾಲ್ಕು ಜನ ಅಪರಿಚಿತರ ಶವ ಪತ್ತೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ಘಟನೆ ಬೆಟ್ಟಗೇರಹಳ್ಳಿಯ ನಾರಾಯಣಸ್ವಾಮಿ ಅವರಿಗೆ ಸೇರಿದ ಬಾವಿ ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳ ಶವ ಪತ್ತೆ ಮುಳವಾಗಿಲು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ

ಕೋಲಾರ(ಜು.12): ಬಾವಿಯೊಂದರಲ್ಲಿ ಅನುಮಾನಾಸ್ಪದವಾಗಿ ನಾಲ್ಕು ಜನ ಅಪರಿಚಿತರ ಶವ ಪತ್ತೆಯಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೆಟ್ಟಗೇರಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ನಾರಾಯಣಸ್ವಾಮಿ ಎಂಬುವವರಿಗೆ ಸೇರಿದ ಬಾವಿಯಲ್ಲಿ ನಾಲ್ಕು ಅಪರಿಚಿತ ಶವ ಪತ್ತೆಯಾಗಿದ್ದು, ಎರಡು ದಿನಗಳ ಹಿಂದೆಯೇ ಈ ಬಾವಿಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಬಾವಿಯಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳ ಶವ ದೊರೆತಿದ್ದು, ಮೃತರ ಹೆಸರು ಮತ್ತು ಗುರುತು ತಿಳಿದುಬಂದಿಲ್ಲ.

"

ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ಖಚಿತವಾಗಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು
ಬೆಂಗಳೂರಲ್ಲಿ ಚಿನ್ನದ ಬೆಲೆ 15,200 ರೂ ಇಳಿಕೆ, ಬಂಗಾರ ಖರೀದಿಗೆ ಇದು ಸೂಕ್ತ ಸಮಯವೇ?