ಐದು ಕ್ಷೇತ್ರಗಳ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳೆಷ್ಟು?

By Web DeskFirst Published Oct 17, 2018, 7:13 AM IST
Highlights

ಕರ್ನಾಟಕದ ಒಟ್ಟು 5 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ಲೋಕಸಭೆ ಹಾಗೂ ವಿಧಾನಸಭೆಯ ಈ ಕ್ಷೇತ್ರಗಳಿಗೆ ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು ಒಟ್ಟು 40 ಮಂದಿ ಕಣದಲ್ಲಿದ್ದಾರೆ. 

ಬೆಂಗಳೂರು :  ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಮಂಗಳವಾರ ಮುಕ್ತಾಯಗೊಂಡಿದ್ದು, ಬಿಜೆಪಿ ಯಿಂದ ಬಿ.ವೈ.ರಾಘವೇಂದ್ರ, ಜೆ.ಶಾಂತಾ, ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ, ಮಧು  ಬಂಗಾರಪ್ಪ, ಕಾಂಗ್ರೆಸ್‌ನಿಂದ ವಿ.ಎಸ್.ಉಗ್ರಪ್ಪ ಸೇರಿದಂತೆ ಒಟ್ಟು 40 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 

ಬುಧವಾರ (ಅ.17) ನಾಮಪತ್ರ ಪರಿಶೀಲನೆ ನಡೆಸಲಾ ಗುತ್ತದೆ. ಅ.20ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಅಂದು ಚುನಾವಣಾ ಅಖಾಡ ದಲ್ಲಿರುವ ಅಧಿಕೃತ ಅಭ್ಯರ್ಥಿಗಳು ಎಷ್ಟು ಎಂಬುದು ನಿಖರವಾದ ಮಾಹಿತಿ ಲಭ್ಯವಾಗಲಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 

ಮೈತ್ರಿ ಪಕ್ಷಗಳ ಒಪ್ಪಂದದಂತೆ ಮೂರು ಕಡೆ ಜೆಡಿಎಸ್, ಎರಡು ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಪ್ರತಿಪಕ್ಷ ಬಿಜೆಪಿ ಆಡಳಿತಾರೂಢ ಮೈತ್ರಿ ಪಕ್ಷಕ್ಕೆ ತಿರುಗೇಟು ನೀಡಲು 5 ಕ್ಷೇತ್ರದಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿ ಳಿಸಿದೆ. ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಸಮ್ಮಿಶ್ರ ಸರ್ಕಾರದ ಒಮ್ಮತದ ಅಭ್ಯರ್ಥಿಯಾಗಿ ಜೆಡಿಎಸ್‌ನ ಅನಿತಾ ಕುಮಾರಸ್ವಾಮಿ, ಬಿಜೆಪಿಯಿಂದ ಚಂದ್ರಶೇಖರ್ ಸೇರಿ ದಂತೆ 10 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಜಮಖಂಡಿ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡಲಾಗಿದ್ದು, ನಿಧನರಾಗಿರುವ ಸಿದ್ದು ನ್ಯಾಮೇಗೌಡ ಪುತ್ರ ಆನಂದ್ ಸಿದ್ದು ನ್ಯಾಮೇಗೌಡ, ಬಿಜೆಪಿ ಅಭ್ಯರ್ಥಿ ಯಾಗಿ ಶ್ರೀಕಾಂತ ಕುಲಕರ್ಣಿ ಸೇರಿದಂತೆ 10 ಮಂದಿ ಕಣಕ್ಕಿಳಿದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್‌ನ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾ ರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ಬಿಜೆಪಿ ಅಭ್ಯರ್ಥಿಯಾಗಿ, ಜೆಡಿಯುನಿಂದ ಮಹಿಮಾ ಪಟೇಲ್ ಸೇರಿ ನಾಲ್ವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಜೆಡಿಎಸ್‌ನ ಶಿವರಾಮೇಗೌಡ, ಬಿಜೆಪಿಯ ಡಾ.ಸಿದ್ದರಾಮಯ್ಯ ಸೇರಿ 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಮೈತ್ರಿ ಪಕ್ಷಗಳಿಗೆ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯಾಗಿರುವ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿ ಯಾಗಿ ಮಾಜಿ ಸಂಸದೆ ಜೆ.ಶಾಂತಾ, ಕಾಂಗ್ರೆಸ್‌ನಿಂದ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಸೇರಿದಂತೆ  7 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಹೇಳಿದರು.

click me!