
ಬೆಂಗಳೂರು : ರಾಜ್ಯಾದ್ಯಂತ ಸುಮಾರು 40 ಕ್ಷೇತ್ರಗಳನ್ನು ಲಿಂಗಾಯತ ಮುಖಂಡರಿಗೆ ನೀಡುವಂತೆ ಕಾಂಗ್ರೆಸ್‌ನ ಲಿಂಗಾಯತ ನಾಯಕರು ಪಕ್ಷದ ನಾಯಕತ್ವವನ್ನು ಕೋರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿದ್ದ ಲಿಂಗಾಯತ ಸಮುದಾಯದ ನಾಯಕರಾದ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಗಣಿ ಮತ್ತು ಭೂವಿಜ್ಞಾನ ಸಚಿವ ವಿನಯ ಕುಲಕರ್ಣಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೇ ಹೆಬ್ಬಾಳಕರ್ ಮೊದಲಾದವರು ರಾಜ್ಯದಲ್ಲಿ ಲಿಂಗಾಯತ ಸಮುದಾಯಕ್ಕೆ ಈ ಬಾರಿ 40 ಕ್ಷೇತ್ರಗಳನ್ನು ನೀಡಬೇಕು.
ವಿಶೇಷವಾಗಿ ಪಂಚಮಸಾಲಿ ಒಳಪಂಗಡಕ್ಕೆ 20ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಬೇಕು ಎಂದು ಕೋರಿದರು ಎನ್ನಲಾಗಿದೆ. ಲಿಂಗಾಯತ ನಾಯಕರ ಕೋರಿಕೆಯನ್ನು ಪಕ್ಷದ ಹೈಕಮಾಂಡ್ ಮುಂದಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಾಯಕರಿಗೆ ಭರವಸೆ ನೀಡಿದರು ಎಂದು ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.