
ನವದೆಹಲಿ(ಆ.01): ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಂ ಸಿಂಗ್‌ಗೆ 2017ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿ ನೀಡಬೇಕು ಎಂದು 4208 ಮಂದಿ ಶಿಫಾರಸು ಮಾಡಿದ್ದರು ಎಂದು ಗೊತ್ತಾಗಿದೆ. ಈ ಬಾರಿ ಪದ್ಮ ಪ್ರಶಸ್ತಿಗೆ 18768 ಅರ್ಜಿಗಳನ್ನು ಕೇಂದ್ರ ಗೃಹ ಸಚಿವಾಲಯ ಸ್ವೀಕರಿಸಿದ್ದು, ಡೇರಾ ಸಚ್ಚಾ ಮುಖ್ಯಸ್ಥನಿಗೆ ಮೂರರಲ್ಲಿ ಒಂದು ಪದ್ಮ ಪ್ರಶಸ್ತಿ ನೀಡಬೇಕೆಂದು 4208ಶಿಫಾರಸು ಸಲ್ಲಿಸಲಾಗಿದೆ. ಈ ಎಲ್ಲಾ ಶಿಫಾರಸುಗಳಲ್ಲಿ ‘ಸೇಂಟ್ ಡಾ. ಗುರ್ಮೀತ್ ರಾಮ್ ರಹೀಂ ಸಿಂಗ್ ಜಿ ಇನ್ಸಾನ್’ ಹೆಸರನ್ನು ಉಲ್ಲೇಖಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.