
ನವದೆಹಲಿ(ಆ.14): ಹಿಮಾಚಲ ಪ್ರದೇಶದ ಮಂಡಿ-ಪಠಾನಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಘ ಸ್ಪೋಟದಿಂದ ಸಂಭವಿಸಿದ ಭಾರೀ ಭೂಕುಸಿತದಿಂದ ಎರಡು ಬಸ್ಸು ಸೇರಿದಂತೆ ಹಲವು ವಾಹನಗಳು ಉರುಳಿ ಬಿದ್ದಿವೆ. ಈ ದುರ್ಘಟನೆಯಲ್ಲಿ ಇದುವರೆಗೆ 46 ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಹಲವು ಮಂದಿ ಗಾಯಗೊಂಡವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎನ್ನಲಾಗಿದೆ. ಒಂದು ಬಸ್ಸು ಮನಾಲಿಯಿಂದ ಕತ್ರಾ ಮತ್ತೊಂದು ಮನಾಲಿಯಿಂದ ಚಂಬಾ ಕಡೆ ತೆರಳುತ್ತಿತ್ತು. ಕೊಟರೂಪಿಯಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ.
ಹಲವು ಪ್ರಯಾಣಿಕರು ಮಣ್ಣಿನಡಿ ಸಿಲುಕಿದ್ದಾರೆ. ಹಲವು ವಾಹನಗಳೂ ಕೂಡ ಮಣ್ಣಿನಡಿ ಸಿಲುಕಿವೆ. ಭಾರತೀಯ ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದೆ.
ಕಳೆದ ಮೂರು ದಶಕದಲ್ಲಿ ಹಿಮಾಚಲಪ್ರದೇಶದಲ್ಲಿ ಸಂಭವಿಸಿದ ಮೂರನೇ ಭೀಕರ ಭೂಕುಸಿತ ಇದಾಗಿದೆ. 1988ರಲ್ಲಿ ಶಿಮ್ಲಾ ಜಿಲ್ಲೆಯ ಮಟಿಯಾನಾದಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ಬಸ್ಸು ಸಿಲುಕಿ 45 ಮಂದಿ ಸಾವನ್ನಪ್ಪಿದ್ದರು. 1994ರಲ್ಲಿ ಕುಲು ಜಿಲ್ಲೆಯ ಲುಗ್ಗರ್ ಹಟಿಯಲ್ಲಿ ಇದೇ ರೀತಿ ಅವಘಡ ಸಂಭವಿಸಿ 42 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.