
ವಿಜಯಪುರ (ಏ.14): ವಿಜಯಪುರ ಜಿಲ್ಲಾ ಅಪರಾಧ ಪತ್ತೆ ದಳದ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ, ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 5 ಮಂದಿಯನ್ನು ಬಂಧಿಸಿದ್ದಾರೆ.
ವಿಜಯಪುರದ ಮಲಿಕ್ ಮುರಸಲ್, ಕಲ್ಲು ಮದಾಪೂರ ಜಾಯನಗೌಡ ಪಾಟೀಲ, ವಿಷ್ಣು ಹಳ್ಳದಮನಿ, ಸಂಗಣ್ಣ ಹರವಾಳ ಬಂಧಿತ ಆರೋಪಿಗಳು.
ಬಂಧಿತರಿಂದ 97 ಸಾವಿರ ನಗದು, 2 ಟಿವಿ, 10 ಮೊಬೈಲ್ ಫೋನ್, 12 ಸಿಎಂ ಹಾಗೂ 2 ಸೆಟ್’ಟಾಪ್ ಬಾಕ್ಸ್’ಗಳನ್ನು ವಶಪಡಿಸಿಕೊಂಡಿದ್ದಾರೆ.
ನಿನ್ನೆ ನಡೆದ ಕೊಲ್ಕತ್ತಾ ಮತ್ತು ಪಂಜಾಬ್ ನಡುವಿನ ಪಂದ್ಯಕ್ಕೆ ಬೆಟ್ಟಿಂಗ್ ಕಟ್ಟಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿಸಿದ ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ. ಇವರೆಲ್ಲ ಗೋವಾದ ಬುಕ್ಕಿಗಳ ಜೊತೆ ಬೆಟ್ಟಿಂಗ್ ಆಡುತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. 5 ಜನ ಏಜೆಂಟರ್‌ಗಳು ಪರಾರಿಯಾಗಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.