
ಪ್ಯಾರಿಸ್ : ಮದುವೆಯಾಗಲು ಕನಿಷ್ಟ ವಯೋಮಿತಿಯನ್ನು ನಿಗದಿ ಮಾಡಿದಂತೆ ಇದೀಗ ಸೆಕ್ಸ್’ಗೂ ಕೂಡ ವಯೋಮಿತಿಯೊಂದನ್ನು ಫಿಕ್ಸ್ ಮಾಡಲಾಗಿದೆ. 15 ವರ್ಷಕ್ಕಿಂತ ಮೊದಲು ಯಾರೂ ಕೂಡ ಸೆಕ್ಸ್’ನಲ್ಲಿ ಭಾಗಿಯಾಗುವಂತಿಲ್ಲ ಎಂದು ಫ್ರಾನ್ಸ್ ಸರ್ಕಾರ ಕಾನೂನನ್ನು ಜಾರಿ ಮಾಡುವ ಬಗ್ಗೆ ಪ್ರಸ್ತಾಪ ಮಾಡಿದೆ.
15 ವರ್ಷಕ್ಕಿಂತ ಒಳಗಿನ ಯಾವುದೇ ಮಕ್ಕಳು ಕೂಡ ಸೆಕ್ಸ್ ಮಾಡುವಂತಿಲ್ಲ ಎಂದು ಹೇಳಿದೆ. 11 ವರ್ಷದ ಹುಡುಗಿಯರೊಂದಿಗೆ ಪುರುಷರು ಸೆಕ್ಸ್ ಮಾಡಿದ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಇಂತಹ ಕಾನೂನೊಂದನ್ನು ಜಾರಿ ಮಾಡುವ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಅಲ್ಲದೇ ಅಂತವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಅತ್ಯಂತ ಕಡಿಮೆ ವಯಸ್ಸಿನಲ್ಲಿ ಸೆಕ್ಸ್ ಹೊಂದುವುದು ಆರೋಗ್ಯದ ದೃಷ್ಟಿಯಿಂದ ಸಮಸ್ಯಾತ್ಮಕವಾಗಿರುವುದರಿಂದ ಈ ರೀತಿಯಾದ ಕಾನೂನನ್ನು ಜಾರಿ ಮಾಡಲು ಪ್ರಸ್ತಾಪಿಸಲಾಗುತ್ತಿದೆ ಎಂದು ಇಲ್ಲಿನ ಮಹಿಳಾ ಕಲ್ಯಾಣ ಸಚಿವಾಲಯವು ಹೇಳಿದೆ. ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೊಂದಿಗೆ ಸೆಕ್ಸ್ ಮಾಡುವುದು ಅಪರಾಧವೆಂದು ಪರಿಗಣಿಸಲಾಗುತ್ತದೆ ಎಂದು ಫ್ರಾನ್ಸ್ ಸಚಿವಾಲಯವು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.