ಕನ್ನಡಿಗರು ಒಲಿಂಪಿಕ್ಸ್ ಚಿನ್ನ ಗೆದ್ದರೆ 5 ಕೋಟಿ ಬಹುಮಾನ

Published : Jan 06, 2017, 06:35 PM ISTUpdated : Apr 11, 2018, 12:58 PM IST
ಕನ್ನಡಿಗರು ಒಲಿಂಪಿಕ್ಸ್ ಚಿನ್ನ ಗೆದ್ದರೆ 5 ಕೋಟಿ ಬಹುಮಾನ

ಸಾರಾಂಶ

ರಾಜ್ಯದಲ್ಲಿ ಈಗಾಗಲೇ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ 662 ಕ್ರೀಡಾಪಟುಗಳನ್ನು ವಿಶೇಷ ಪ್ರೋತ್ಸಾಹ ಯೋಜನೆಗೆ ಆಯ್ಕೆ ಮಾಡಲಾಗಿದೆ.

ಉಡುಪಿ(ಜ.7): ಮುಂದಿನ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ರಾಜ್ಯದ ಕ್ರೀಡಾಪಟುಗೆ 5 ಕೋಟಿ, ಬೆಳ್ಳಿ ಗೆದ್ದರೆ 3 ಕೋಟಿ ಹಾಗೂ ಕಂಚು ಗೆದ್ದರೆ 2 ಕೋಟಿ ನಗದು ಬಹುಮಾನ ನೀಡಲಾಗುವುದು ಎಂದು ರಾಜ್ಯ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಘೋಷಿಸಿದ್ದಾರೆ.

ನಗರದ ಅಜ್ಜರಕಾಡು ಕ್ರೀಡಾಂಗಣದಲ್ಲಿ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ ಸರ್ಕಾರದ ಕ್ರೀಡಾ ಮಂತ್ರಾಲಯ, ಕರ್ನಾಟಕ ಕ್ರೀಡಾ ಪ್ರಾಕಾರದ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ‘ಖೇಲೋ ಇಂಡಿಯಾ’ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ತೋರುವ ಆಯ್ದ 1000 ಪ್ರತಿಭಾವಂತ ಕ್ರೀಡಾಪಟುಗಳಿಗೆ ಕಾರ್ಪೋರೇಟ್ ಸಂಸ್ಥೆಗಳ ನೆರವಿನಿಂದ ಎಲ್ಲ ರೀತಿಯ ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಈಗಾಗಲೇ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ 662 ಕ್ರೀಡಾಪಟುಗಳನ್ನು ವಿಶೇಷ ಪ್ರೋತ್ಸಾಹ ಯೋಜನೆಗೆ ಆಯ್ಕೆ ಮಾಡಲಾಗಿದೆ. ಒಟ್ಟು 1000 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ, ಅವರಿಗೆ ವಿದೇಶಗಳಲ್ಲಿ ತರಬೇತಿ, ವಿದ್ಯಾಭ್ಯಾಸದ ವೆಚ್ಚ, ಪ್ರಯಾಣ ವೆಚ್ಚ ಸೇರಿ ಎಲ್ಲ ರೀತಿಯ ವೆಚ್ಚಗಳನ್ನು ಕಾರ್ಪೋರೇಟ್ ಸಂಸ್ಥೆಗಳ ನೆರವಿನಿಂದ ಒದಗಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಪ್ರೀತಿಯಿಂದ ಊಟಕ್ಕೆ ಕರೀತಾರೆ ಬೇಡ ಅನ್ನೋಕಾಗುತ್ತಾ: DCM ಡಿಕೆ ಶಿವಕುಮಾರ್
ಪಿಎಂ ಫಸಲ್ ಬಿಮಾ ಯೋಜನೆ ದೊಡ್ಡ ಗೋಲ್‌ಮಾಲ್‌: ಸಚಿವ ಈಶ್ವರ್ ಖಂಡ್ರೆ ಗಂಭೀರ ಆರೋಪ