
ಬೆಂಗಳೂರು(ಅ.6): ಬೆಳ್ಳಂದೂರಿನ ಕಟ್ಟಡ ಕುಸಿತದಲ್ಲಿ ಸಾವನಪ್ಪಿದವರ ಸಂಖ್ಯೆ 5ಕ್ಕೆ ಏರಿದೆ. ಅವಶೇಷಗಳಡಿ ಸಿಲುಕಿದ್ದ ಮತ್ತೊಬ್ಬ ಕಾರ್ಮಿಕನ ಶವ ಪತ್ತೆಯಾಗಿದ್ದು, ಮೃತನನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಧ್ರುವ(56) ಎಂದು ಗುರುತಿಸಲಾಗಿದೆ. ಧ್ರುವನ ಶವವನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದಾರೆ. ಬಿಬಿಎಂಪಿ, ಎನ್'ಡಿ'ಆರ್'ಎಫ್, ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ಮುಂದುವರೆಸಲಾಗಿದೆ. ಮತ್ತೊಬ್ಬ ಕಾರ್ಮಿಕ ಸಂಶುಲ್(23)ಗಾಗಿ ಶೋಧ ಕಾರ್ಯ ನಡೆದಿದೆ. ಕಟ್ಟಡ ಮಾಲೀಕರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.