
ಬೆಂಗಳೂರು, [ನ.03]: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳು ಸೇರಿ ಒಟ್ಟು ಐದು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯವಾಗಿದೆ.
ಇಂದು [ಶನಿವಾರ] ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭೆಗೆ ಮತದಾನ ನಡೆದರೆ, ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ರವರೆಗೂ ಮತದಾನ ಪ್ರಕ್ರಿಯೆ ನಡೆದಿದ್ದು. ಬಹುತೇಕ ಎಲ್ಲ ಕಡೆ ಶಾಂತಿಯುತ ಮತದಾನವಾಗಿದೆ.
ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಅಡಗಿದ್ದು, ಇದೇ ನವೆಂಬರ್ 6 ಮಂಗಳವಾರದಂದು ಹೊರ ಬೀಳಲಿದೆ. ಹಾಗಾದ್ರೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಸ್ಥಳೀಯ ಚುನಾವಣಾಧಿಕಾರಿ ಮಾಹಿತಿ ಪ್ರಕಾರ ಶೇಕಡಾವಾರು ಮತದಾನದ ಮಾಹಿತಿ ಇಲ್ಲಿದೆ.
ಸುವರ್ಣ ನ್ಯೂಸ್ ಗೆ ಆಯಾ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳ ಮಾಹಿತಿ ಪ್ರಕಾರ
* ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶೇಕಡ 63.85ರಷ್ಟು ಮತದಾನ.
* ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇಕಡ 53.93ರಷ್ಟು ಮತದಾನ.
* ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶೇಕಡ 61.05ರಷ್ಟು ಮತದಾನ.
* ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ 71.88ರಷ್ಟು ಮತದಾನ.
* ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ 77.17ರಷ್ಟು ಮತದಾನ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.