
ವಿಜಯಪುರ: ಟಂಟಂ- ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬರಟಗಿ ತಾಂಡಾ ಬಳಿ ಶುಕ್ರವಾರ ಸಂಜೆ ನಡೆದಿದೆ.
ಟಂಟಂ ಚಾಲಕ ಅರವಿಂದ ಅಗಸರ (32), ಸುನಿತಾ ಅಗಸರ (28), ಗಂಗವ್ವ ಬಸಪ್ಪ ಅಗಸರ (49) ಸೃಷ್ಟಿ(6), ವಿನಯಾ (5) ಮೃತಪಟ್ಟವರು. 2 ವರ್ಷದ ಬಾಲಕ ಮಲ್ಲಿಕಾರ್ಜುನ ತೀವ್ರ ಗಾಯಗೊಂಡಿದ್ದು ವಿಜಯಪುರ ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದವರು. ಲಾರಿ ಚಾಲಕನ ನಿರ್ಲಕ್ಷ್ಯವೇ ದುರ್ಘಟನೆಗೆ ಕಾರಣ ಎನ್ನಲಾಗಿದೆ. ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ