ಪಂಚ ರಾಜ್ಯ ಫಲಿತಾಂಶ: ದೇಶ ಅಹಂ ಮುಕ್ತವಾಗ್ತಿದೆ, ಮಾಜಿ ಪ್ರಧಾನಿ ಟ್ವೀಟ್...

By Web DeskFirst Published Dec 11, 2018, 3:18 PM IST
Highlights

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಟ್ವೀಟ್‌ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬೆಂಗಳೂರು(ಡಿ.11) ಭಾರತ ಅಹಂ ಮುಕ್ತವಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಪಂಚರಾಜ್ಯಗಳ ಫಲಿತಾಂಶಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ದೇವೇಗೌಡ, ನಾವು ಹೇಳಿದ್ದೆಲ್ಲ ಇಲ್ಲಿ ನಡೆಯೋದಿಲ್ಲ. 'ಕಾಂಗ್ರೆಸ್ ಮುಕ್ತ ಭಾರತ' ಕೇವಲ ಬಿಜೆಪಿ ಪಕ್ಷದ ಅಹಮಿಕೆ  ಎಂದು ಟ್ವೀಟ್ ಮಾಡಿದ್ದಾರೆ.

'ಇದು ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜೆಗಳು ಹೇಳಿದಂತೆ ನಾವು ಕೇಳಬೇಕಷ್ಟೇ. ನಾವು ಹೇಳಿದ್ದೆಲ್ಲ ಇಲ್ಲಿ ನಡೆಯುವುದಿಲ್ಲ. ಕಾಂಗ್ರೆಸ್ ಮುಕ್ತ ಭಾರತ, ಪ್ರತಿಪಕ್ಷ ಮುಕ್ತ ಭಾರತ ಮಾಡುತ್ತೇವೆಂಬುದೆಲ್ಲ ಕೇವಲ ಅಹಮಿಕೆ. ಜನ ಇಂದು ಅಹಂ ಮುಕ್ತ ಭಾರತ ಮಾಡಿದ್ದಾರೆ. ಸಮಸ್ಯೆ ಮುಕ್ತ ಭಾರತ ಮಾಡುವುದರತ್ತ ಅಧಿಕಾರರೂಢ ಬಿಜೆಪಿ ಮನಸ್ಸು ಮಾಡಲಿ' ಎಂದು ದೇವೇಗೌಡ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ದೇಶದ ಹೊಸ ಬಾಹುಬಲಿ: ಸಿಧು!

ಪಂಚ ರಾಜ್ಯ ಫಲಿತಾಂಶ ಬೆಳಗ್ಗೆಯಿಂದ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ  ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಮುಂದುವರಿದಿದೆ.


ಇದು ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜೆಗಳು ಹೇಳಿದಂತೆ ನಾವು ಕೇಳಬೇಕಷ್ಟೇ. ನಾವು ಹೇಳಿದ್ದೆಲ್ಲ ಇಲ್ಲಿ ನಡೆಯುವುದಿಲ್ಲ. ಕಾಂಗ್ರೆಸ್ ಮುಕ್ತ ಭಾರತ, ಪ್ರತಿಪಕ್ಷ ಮುಕ್ತ ಭಾರತ ಮಾಡುತ್ತೇವೆಂಬುದೆಲ್ಲ ಕೇವಲ ಅಹಮಿಕೆ. ಜನ ಇಂದು ಅಹಂ ಮುಕ್ತ ಭಾರತ ಮಾಡಿದ್ದಾರೆ. ಸಮಸ್ಯೆ ಮುಕ್ತ ಭಾರತ ಮಾಡುವುದರತ್ತ ಅಧಿಕಾರರೂಢ ಬಿಜೆಪಿ ಮನಸ್ಸು ಮಾಡಲಿ.

— H D Devegowda (@H_D_Devegowda)

The intentions of making India 'Congress-free','opposition-free' shows the arrogance of BJP. The people have made this nation 'arrogance-free' by voting out BJP.

Atleast now, the BJP should put some efforts to make this nation 'problem-free' and stop the unwanted 'travel-spree'.

— H D Devegowda (@H_D_Devegowda)
click me!