ಲೋಕ ಚುನಾವಣೆ ಜತೆ ಪಂಚರಾಜ್ಯ ಚುನಾವಣೆ

Published : Dec 04, 2018, 09:46 AM IST
ಲೋಕ ಚುನಾವಣೆ ಜತೆ  ಪಂಚರಾಜ್ಯ ಚುನಾವಣೆ

ಸಾರಾಂಶ

ಲೋಕಸಭಾ ಚುನಾವಣೆ ಜತೆ ಪಂಚರಾಜ್ಯ ಚುನಾವಣೆ ನಡೆಸಲು ಚುನಾವಣಾ ಆಯೋಗ ಚಿಂತನೆ | ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ಹಾಗೂ ಜಮ್ಮು ಕಾಶ್ಮೀರ ರಾಜ್ಯಗಳಿಗೆ ಚುನಾವಣೆ ನಡೆಯಲಿದೆ. 

ನವದೆಹಲಿ (ಡಿ. 04): ಶೀಘ್ರದಲ್ಲೇ ವಿಧಾನಸಭೆ ಅವಧಿ ಪೂರ್ಣಗೊಳ್ಳಲಿರುವ ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳ ಚುನಾವಣೆಯನ್ನು 2019ರ ಲೋಕಸಭಾ ಚುನಾವಣೆ ವೇಳೆಯೇ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಅಲ್ಲದೆ, ರಾಜಕೀಯ ಬಿಕ್ಕಟ್ಟಿನ ಪರಿಣಾಮ ವಿಧಾನಸಭೆ ವಿಸರ್ಜಿಸಲಾದ ಜಮ್ಮು-ಕಾಶ್ಮೀರದಲ್ಲಿಯೂ ಇದೇ ವೇಳೆ ವಿಧಾನಸಭೆ ಚುನಾವಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಈ ಪಂಚ ರಾಜ್ಯಗಳ ಚುನಾವಣೆಯನ್ನು ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಹಮ್ಮಿಕೊಂಡರೆ, ಭದ್ರತಾ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಆಯೋಗ ಪ್ರತಿಪಾದಿಸಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಾಕಿಸ್ತಾನದಲ್ಲಿ ಬ್ರಾಹ್ಮಿಲಿಪಿಯುಳ್ಳ ಶಿವನ ಮುದ್ರೆ: 1700 ವರ್ಷಗಳ ಹಿಂದಿನ ರಹಸ್ಯ
ಜೆಪ್ಟೋ, ಬ್ಲಿಂಕಿಟ್ ಬೆನ್ನಲ್ಲೇ 'ಜೋಮ್ಯಾಟೋ ಹೈಪರ್‌ಪ್ಯೂರ್' ಗೋದಾಮು ಮೇಲೆಯೂ ದಾಳಿ! 146 kg ಚಿಕನ್ ಸೇರಿ 40 ಆಹಾರ ಧಾನ್ಯ ಜಪ್ತಿ!