
ಕಡೂರು: ಬಿಜೆಪಿ ರಾಜ್ಯ ಮುಖಂಡರು ಡಿ. 3 ಸೋಮವಾರ ಬರಪೀಡಿತ ಕಡೂರು ತಾಲೂಕಿನಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ. ಒಟ್ಟು ಐದು ತಂಡಗಳಾಗಿ ಬಿಜೆಪಿ ಬರ ಅಧ್ಯಯನಕ್ಕೆ ಹೊರಡಲಿದೆ.
ಬೆಳಗ್ಗೆ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ತಂಡವು ಕಡೂರು ತಾಲೂಕಿನಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ.
ತಂಡದಲ್ಲಿ ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹಾಗೂ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಇರಲಿದ್ದು, ತೆಂಗು ಸೇರಿ ವಿವಿಧ ಬೆಳೆ ಹಾನಿ ಸಮಸ್ಯೆಗಳ ಅಧ್ಯಯನ ಕೈಗೊಳ್ಳಲಿದ್ದಾರೆ. ಬರ ಅಧ್ಯಯನದ ನಂತರ ಈ ಕುರಿತು ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಸೂಕ್ತ ಪರಿಹಾರಕ್ಕೆ ಮನವಿ ಮಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.