ರಂಜಾನ್‌ ರಜೆ: ಇಂದು 500 ವಿಶೇಷ ಬಸ್‌

Published : Jun 24, 2017, 11:16 AM ISTUpdated : Apr 11, 2018, 12:47 PM IST
ರಂಜಾನ್‌ ರಜೆ: ಇಂದು 500 ವಿಶೇಷ ಬಸ್‌

ಸಾರಾಂಶ

ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಜೂ.24ರಂದು ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ ಸುಮಾರು 500 ಹೆಚ್ಚುವರಿ ಬಸ್‌ಗಳ ವಿಶೇಷ ಸೇವೆ ಆರಂಭಿಸಿದೆ.

ಬೆಂಗಳೂರು: ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಜೂ.24ರಂದು ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ ಸುಮಾರು 500 ಹೆಚ್ಚುವರಿ ಬಸ್‌ಗಳ ವಿಶೇಷ ಸೇವೆ ಆರಂಭಿಸಿದೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಿಜಾಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮೊದಲಾದ ಸ್ಥಳಗಳಿಗೆ ಬಸ್‌ಗಳು ಸಂಚರಿಸಲಿವೆ.

ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ ಹಾಗೂ ಶಾಂತಿನಗರ ಬಸ್‌ ನಿಲ್ದಾಣದಿಂದ ಮಧುರೈ, ಕುಂಭಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್‌ ಮೊದಲಾದ ಸ್ಥಳಗಳಿಗೆ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರು ನಗರದ ಜಯನಗರ, ಜೆ.ಪಿ.ನಗರ, ಜಯನಗರ 4ನೇ ಬ್ಲಾಕ್‌ ಮತ್ತು 9ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌(ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್‌ಗಳ ಸೇವೆ ನೀಡಲಾಗಿದೆ.

ವಾಯುವ್ಯ ಕರ್ನಾಟಕದ ಪ್ರದೇಶಗಳ ಕಡೆಗೆ (ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ ಇತ್ಯಾದಿ) ಕಾರ್ಯಾಚರಣೆಯಾಗುವ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಲಾದ ವಿಶೇಷ ಬಸ್‌ಗಳು ಮೈಸೂರು ರಸ್ತೆ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಿಂದ ಹೊರಡಲಿವೆ.

ಸದರಿ ಮಾರ್ಗಗಳಲ್ಲಿ ಸಂಚರಿಸುವ ಮುಂಗಡ ಕಾಯಿ ್ದರಿಸದ ವಿಶೇಷ ಬಸ್‌ಗಳು ಕೆಂಪೇಗೌಡ ಬಸ್‌ ನಿಲ್ದಾಣದಿಂದಲೂ ಹೊರಡಲಿವೆ. ಈಶಾನ್ಯ ಕರ್ನಾಟಕದ ಪ್ರದೇಶಗಳ ಕಡೆಗೆ (ಕಲಬುರಗಿ, ಬಳ್ಳಾರಿ, ರಾಯಚೂರು, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ್‌ ಇತ್ಯಾದಿ) ಸಂಚರಿಸುವ ಮುಂಗಡ ಆಸನಗಳನ್ನು ಕಾಯ್ದಿರಿಸಲಾದ ವಿಶೇಷ ಬಸ್‌ಗಳನ್ನು ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣದಿಂದ ಹೊರಡಲಿವೆ. ಜತೆಗೆ ಕೆಂಪೇಗೌಡ ಬಸ್‌ ನಿಲ್ದಾಣದಿಂದಲೂ ಕೆಲ ಬಸ್‌ ಸಂಚರಿಸಲಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್