
ರಿಯೋ ಡಿ ಜನೈರೋ[ಜ.28]: ಬ್ರೆಜಿಲ್‌ನ ಗಣಿ ಪ್ರದೇಶವೊಂದರ ಬಳಿ ತ್ಯಾಜ್ಯ ಸಂಗ್ರಹಿಸಿದ್ದ ಅಣೆಕಟ್ಟೊಂದು ಒಡೆದುಹೋದ ಪರಿಣಾಮ 58 ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 300ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಅವರೆಲ್ಲಾ ಸಾವನ್ನಪ್ಪಿರುವ ಭೀತಿ ಎದುರಾಗಿದೆ.
ಈ ನಡುವೆ ಅಣೆಕಟ್ಟಿನಿಂದ ಹೊರಬಂದ ತ್ಯಾಜ್ಯ ಇನ್ನಷ್ಟುಪ್ರದೇಶಗಳನ್ನು ಆವರಿಸಿಕೊಳ್ಳುವ ಭೀತಿಯ ಹಿನ್ನೆಲೆಯಲ್ಲಿ 25000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ತೆರವುಗೊಳಿಸಲಾಗುತ್ತಿದೆ. ಬ್ರುಮೇಡಿನ್ಹೋ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. 282 ಅಡಿ ಎತ್ತರದ ಈ ತ್ಯಾಜ್ಯ ಸಂಗ್ರಹ ಅಣೆಕಟ್ಟನ್ನು 42 ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. ಇತ್ತೀಚೆಗಷ್ಟೇ ಈ ಅಣೆಕಟ್ಟಿನ ಸುರಕ್ಷತಾ ಪರೀಕ್ಷೆ ನಡೆಸಲಾಗಿತ್ತು ಎಂದು ಗಣಿಗಾರಿಕೆ ನಡೆಸುತ್ತಿರುವ ವೇಲ್ ಕಂಪನಿ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ