ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಮುಖಂಡ

Published : Sep 18, 2018, 11:26 AM ISTUpdated : Sep 19, 2018, 09:28 AM IST
ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಮುಖಂಡ

ಸಾರಾಂಶ

ಕಾಂಗ್ರೆಸ್ ಮುಖಂಡರೋರ್ವರು ಹೊಸ ಬಾಂಬ್ ಸಿಡಿಸಿದ್ದಾರೆ. ಒಂದು ವೇಳೆ ಬಿಜೆಪಿಯವರು ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಸೆಳೆದರೆ, ಕಾಂಗ್ರೆಸ್‌ ಸಹ ಬಿಜೆಪಿ ಶಾಸಕರನ್ನು ತನ್ನತ್ತ ಸೆಳೆದುಕೊಳ್ಳಲಿದೆ ಎಂದಿದ್ದಾರೆ. 

 ರಾಯಚೂರು :  ಬಿಜೆಪಿಯ 6 ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ. ಒಂದು ವೇಳೆ ಬಿಜೆಪಿಯವರು ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಸೆಳೆದರೆ, ಕಾಂಗ್ರೆಸ್‌ ಸಹ ಬಿಜೆಪಿ ಶಾಸಕರನ್ನು ತನ್ನತ್ತ ಸೆಳೆದುಕೊಳ್ಳಲಿದೆ ಎಂದು ಎಐಸಿಸಿ ಕಾರ್ಯದರ್ಶಿ, ತೆಲಂಗಾಣ ರಾಜ್ಯದ ಉಸ್ತುವಾರಿ ಹಾಗೂ ಎಂಎಲ್ಸಿ ಎನ್‌.ಎಸ್‌.ಬೋಸರಾಜು ಹೊಸ ಬಾಂಬ್‌ ಸಿಡಿಸಿದ್ದಾರೆ. ಡಿಎಆರ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ರಾಜ್ಯ ಸರ್ಕಾರ ಸುಭದ್ರವಾಗಿದೆ. 

ಅದನ್ನು ಅತಂತ್ರಗೊಳಿಸಲು ಬಿಜೆಪಿಯವರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಯಾವ ಶಾಸಕರೂ ಬಿಜೆಪಿಯೊಂದಿಗೆ ಸಂಪರ್ಕ ಹೊಂದಿಲ್ಲ. ಕಾಂಗ್ರೆಸ್‌ನ ಯಾವೊಬ್ಬ ಶಾಸಕನು ಪಕ್ಷ ಬಿಡುವುದಿಲ್ಲ ಎನ್ನುವುದರ ಕುರಿತು ಪಕ್ಷದ ಮುಖಂಡರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ರಾಜಕೀಯ ಎನ್ನುವುದು ಸೈಕಲ್‌ನಂತೆ ಆ ಪಕ್ಷದವರು ನಮ್ಮ ಶಾಸಕರನ್ನು ಸೆಳೆದಲ್ಲಿ ನಾವು ಅವರ ಶಾಸಕರನ್ನು ಸೆಳೆಯುತ್ತೇವೆ ಎಂದು ಹೇಳಿದರು.

ಆಪರೇಷನ್‌ ಕಮಲದಿಂದ ಆಡಳಿತ ನಡೆಸಿದ ಬಿಜೆಪಿ, ಐದು ವರ್ಷಗಳಲ್ಲಿ ಇಡೀ ರಾಜ್ಯವನ್ನು ಹಾಳು ಮಾಡಿದೆ. ಅವರಿಗೆ ಇನ್ನೂ ಬುದ್ಧಿ ಬಂದಿಲ್ಲ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಇದೇ ಕೆಲಸದಲ್ಲಿ ಮಗ್ನರಾಗಿದ್ದಾರೆ. ಸರ್ಕಾರವನ್ನು ಅಂತ್ರಗೊಳಿಸುವ ಕಾರ್ಯ ಕೇವಲ ಕರ್ನಾಟಕದಲ್ಲಿ ನಡೆಸುತ್ತಿಲ್ಲ. ಇಡೀ ದೇಶದಲ್ಲಿಯೇ ಈ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇಂತಹ ಕಾರ್ಯವನ್ನು ಕಾಂಗ್ರೆಸ್‌ ಮಾಡುವುದಿಲ್ಲ ಎಂದು ಬೋಸರಾಜು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ