ಉತ್ತರಪ್ರದೇಶದಲ್ಲಿ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 100ಕ್ಕೆ ಏರಿಕೆ, 100 ಅಧಿಕ ಮಂದಿಗೆ ಗಾಯ

By Suvarna Web DeskFirst Published Nov 19, 2016, 12:28 AM IST
Highlights

ಝಾನ್ಸಿ-ಕಾನ್ಪುರ ರೈಲ್ವೇ ಮಾರ್ಗದಲ್ಲಿ 14 ಬೋಗಿಗಳಿದ್ದ ಇಂದೋರ್ ಪಾಟ್ನಾ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 3.15ರ ಸುಮಾರಿಗೆ ಹಳಿ ತಪ್ಪಿದ್ದರಿಂದಾಗಿ ಪುಖರಾಯಾ ರೈಲ್ವೇ ಸ್ಟೇಷನ್ ಬಳಿ ದುರ್ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ 63ಕ್ಕೂ ಹೆಚ್ಚು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪ್ರಥಮ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿರುವ ಪೊಲೀಸರು ಸ್ಥಳೀಯ ನೆರವಿನೊಂದಿಗೆ ಹಲವರನ್ನು ರಕ್ಷಿಸಿದ್ದಾರೆ. ಸದ್ಯ 30 ಮೃತದೇಹಗಳನ್ನು ಹೊರತೆಗೆಯಲಾಗಿದ. ಭೀಕರ ರೈಲು ದುರಂತವಾಗಿರುವುದರಿಂದ ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.

ಉ.ಪ್ರ(ನ.20): ಉತ್ತರಪ್ರದೇಶದ ಪುಖರಾಯಾ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ 45ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಝಾನ್ಸಿ-ಕಾನ್ಪುರ ರೈಲ್ವೇ ಮಾರ್ಗದಲ್ಲಿ 14 ಬೋಗಿಗಳಿದ್ದ ಇಂದೋರ್ ಪಾಟ್ನಾ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 3.15ರ ಸುಮಾರಿಗೆ ಹಳಿ ತಪ್ಪಿದ್ದರಿಂದಾಗಿ ಪುಖರಾಯಾ ರೈಲ್ವೇ ಸ್ಟೇಷನ್ ಬಳಿ ದುರ್ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ 63ಕ್ಕೂ ಹೆಚ್ಚು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪ್ರಥಮ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿರುವ ಪೊಲೀಸರು ಸ್ಥಳೀಯ ನೆರವಿನೊಂದಿಗೆ ಹಲವರನ್ನು ರಕ್ಷಿಸಿದ್ದಾರೆ. ಸದ್ಯ 30 ಮೃತದೇಹಗಳನ್ನು ಹೊರತೆಗೆಯಲಾಗಿದ. ಭೀಕರ ರೈಲು ದುರಂತವಾಗಿರುವುದರಿಂದ ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.

ಝಾನ್ಸಿ-ಕಾನ್ಪುರ ರೈಲ್ವೆ ಮಾರ್ಗದಲ್ಲಿ ದುರಂತ ಸಂಭವಿಸಿದರಿಂದ ಹಲವು ರೈಲುಗಳ ಮಾರ್ಗವನ್ನು ಬದಲಿಸಲಾಗಿದೆ. ರೈಲು ದುರಂತದ ಸಂಬಂಧ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಸೂಚನೆ ಮೇರೆಗೆ ಎನ್ಡಿಆರ್ಎಫ್ ತಂಡ ಘಟನಾ ಸ್ಥಳಕ್ಕೆ ತೆರಳಲಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಹೆಲ್ಪ್​​​ಲೈನ್​ಗೆ ಕರೆ ಮಾಡಲು ಸೂಚನೆ 

ಕಾನ್ಪುರ - 05121072

ರಾಟ್​​​ಲಾಮ್​ - 074121072 

ಝಾನ್ಸಿ - 05101072

ಇಂದೋರ್​​ - 07311072

 

click me!