
ಬೆಗುಸರಾಯ್[ಅ.29] ನಿಸರ್ಗಕ್ಕೆ ವಿರುದ್ಧವಾದ ರೀತಿಯ ಲೈಂಗಿಕ ಕ್ರಿಯೆಗೆ ವಿದ್ಯಾರ್ಥಿಗಳನ್ನು ಒತ್ತಾಯಿಸುತ್ತಿರುವ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆದ ಮೇಲೆ ಪೊಲೀಸರು ದಿಟ್ಟ ಕ್ರಮ ತೆಗೆದುಕೊಂಡಿದ್ದಾರೆ.
ಫೋಖರಿಯಾ ಪ್ರದೇಶದ ಕುಸ್ವಾಲಾ ವಿದ್ಯಾರ್ಥಿ ನಿಲಯದ ಮಕ್ಕಳ ಮೇಲೆ ನಡೆದ ದೌರ್ಜನ್ಯದ ವಿಡಿಯೋ ವೈರಲ್ ಆಗಿತ್ತು. 18-21 ವರ್ಷದ ವಿದ್ಯಾರ್ಥಿಗಳಿಗೆ ಬಲವಂತವಾಗಿ ಮದ್ಯ ಕುಡಿಸಿ ಅವರನ್ನು ಕಾಮ ತೃಷೆಗೆ ಬಳಸಿಕೊಳ್ಳುತ್ತಿದ್ದರು.
ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು ಮಾಹಿತಿ ಕಲೆ ಹಾಕಿದ ಪೊಲೀಸರು ಹತ್ತಿರದ ಅರಣ್ಯದಲ್ಲಿ ಈ ಅನಾಚಾರ ನಡೆಯುತ್ತಿದೆ ಎಂಬುದನ್ನು ಮನಗಂಡಿದ್ದಾರೆ. ಸಮಯ ನೋಡಿ ದಾಳಿ ಮಾಡಿದ್ದು 7 ಜನರನ್ನು ಬಂಧಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾದವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.