
ಅಂಬಾಲ : ಭಾರೀ ಹಿಮಪಾತದಿಂದಾಗಿ ಚಂಡೀಗರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಂಬಾಲ ಹಾಗೂ ಚಂಡೀಗರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳು ಹಾಗೂ ಇನ್ನೊಂದು ವಾಹನ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉತ್ತರದ ಅನೇಕ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಹಿಮಾಪಾತವಾಗುತ್ತಿದ್ದು, ಇದರಿಂದ ಹೆಚ್ಚಿನ ಅಫಘಾತಗಳಾಗುತ್ತಿವೆ.
ಕಳೆದೊಂದು ವಾರದಲ್ಲಿ ಹರ್ಯಾಣ ರಾಷ್ಟ್ರೀಯ ಹೆದ್ದಾರಿಯಲ್ಲಿ 50ಕ್ಕೂ ಹೆಚ್ಚು ವಾಹನಗಳು ಡಿಕ್ಕಿಯಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ.
ಉತ್ತರದ ಅನೇಕ ರಾಜ್ಯಗಳಲ್ಲಿ ಹಿಮಪಾತದಿಂದಾಗಿ ಉಷ್ಣಾಂಶ ಅತ್ಯಂತ ಕನಿಷ್ಟ ಪ್ರಮಾಣಕ್ಕೆ ಇಳಿಯುತ್ತಿದೆ. ಜನಜೀವನ ಅಸ್ತವ್ಯಸ್ತವಾಗುತ್ತಿದೆ. ರಸ್ತೆಗಳಲ್ಲಿ ವಾಹನ ಸಂಚಾರವೂ ಕೂಡ ದುಸ್ಥರವಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.