
ಶಿಮ್ಲಾ : ಭೀಕರ ಬಸ್ ಅಪಘಾತ ಒಂದರಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅನೇಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದೆ.
ಸಿರ್ ಮುರ್ ಜಿಲ್ಲೆಯ ರಾಜ್ ಗರ್ ಪ್ರದೇಶದಲ್ಲಿ ತೆರಳುವ ವೇಳೆ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಬಸ್ ಗೆ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು, ಬಸ್ ನಲ್ಲಿದ್ದವರಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಜ್ ಗರ್ ಪ್ರದೇಶದ ಸನೋರಾ ನೇರಿ ಪಲ್ ಪ್ರದೇಶದಿಂದ 25 ಕಿ.ಮೀ ಅಂತರದಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಲ್ಲದೇ ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಜೆಸಿಬಿಗಳನ್ನು ಬಳಕೆ ಮಾಡಿ ಅಪಘಾತ ಸ್ಥಳದಿಂದ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.