ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ರಾಜೀವ್‌ ಚಂದ್ರಶೇಖರ್‌

Published : Jul 16, 2019, 11:02 AM IST
ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ರಾಜೀವ್‌ ಚಂದ್ರಶೇಖರ್‌

ಸಾರಾಂಶ

ಸಂಸತ್ತಿನ  ಸಾರ್ವಜನಿಕ ಲೆಕ್ಕ ಪತ್ರ ಸಮಿತಿಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಜೀವ್‌ ಚಂದ್ರಶೇಖರ್‌, ರಾಜೀವ್‌ ಗೌಡ ಸೇರಿದಂತೆ 7 ಜನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. 

ನವದೆಹಲಿ [ಜು.16]: ಸಂಸತ್ತಿನ ಅತ್ಯಂತ ಪ್ರಮುಖ ಸಮಿತಿಗಳ ಪೈಕಿ ಒಂದಾದ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ (ಪಿಎಸಿ)ಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಜೀವ್‌ ಚಂದ್ರಶೇಖರ್‌, ರಾಜೀವ್‌ ಗೌಡ ಸೇರಿದಂತೆ 7 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

22 ಸದಸ್ಯರನ್ನು ಒಳಗೊಂಡ ಪಿಎಸಿಯಲ್ಲಿ 15 ಜನ ಲೋಕಸಭೆಯಿಂದಲೂ, 7 ಜನ ರಾಜ್ಯಸಭೆಯಿಂದಲೂ ಆಯ್ಕೆ ಮಾಡಲಾಗುತ್ತದೆ. ಲೋಕಸಭೆಯಲ್ಲಿ ಅತಿದೊಡ್ಡ ವಿಪಕ್ಷದ ನಾಯಕರೇ ಪಿಎಸಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾರೆ. ಹೀಗಾಗಿ ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕ ಅಧೀರ್‌ ರಂಜನ್‌ ಚೌಧರಿ ಈ ಸಮಿತಿಯ ನೇತೃತ್ವ ವಹಿಸಲಿದ್ದಾರೆ. 

ರಾಜ್ಯಸಭೆಯಿಂದ ಪಿಎಸಿಗೆ ಆಯ್ಕೆಯಾದವರಲ್ಲಿ ಬಿಜೆಪಿಯ ಮೂವರು, ಕಾಂಗ್ರೆಸ್‌ನ ಇಬ್ಬರು, ಟಿಎಂಸಿ, ಶಿರೋಮಣಿ ಅಕಾಲಿದಳದ ತಲಾ ಒಬ್ಬೊಬ್ಬರು ಇದ್ದಾರೆ. ಸರ್ಕಾರದ ಒಟ್ಟು ಆದಾಯ ಮತ್ತು ವೆಚ್ಚವನ್ನು ಪರಿಶೀಲಿಸುವ ಕೆಲಸವನ್ನು ಈ ಸಮಿತಿ ಮಾಡುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುಮಾರ ಪರ್ವತ ಯಾತ್ರೆ, ಬೆಟ್ಟದ ತುದಿಯಲ್ಲಿರುವ ದೇವರ ಪಾದಕ್ಕೆ ಸಂಪ್ರದಾಯದಂತೆ ವಿಶೇಷ ಪೂಜೆ ಸಂಪನ್ನ
ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!