ಕಾಂಗ್ರೆಸ್‌ಗೆ 70 ಮುಖಂಡರ ಸಾಮೂಹಿಕ ರಾಜೀನಾಮೆ

Published : Jun 18, 2019, 12:48 PM ISTUpdated : Jun 18, 2019, 01:39 PM IST
ಕಾಂಗ್ರೆಸ್‌ಗೆ 70 ಮುಖಂಡರ ಸಾಮೂಹಿಕ ರಾಜೀನಾಮೆ

ಸಾರಾಂಶ

70ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು ಸಾಮೂಹಿಕವಾಗಿ ಕಾಂಗ್ರೆಸ್ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ವಾರ್ನಿಂಗ್ ಒಂದನ್ನು ರವಾನಿಸಿದ್ದಾರೆ. ಹಾಗಾದ್ರೆ ಇದಕ್ಕೆ ಕಾರಣವೇನು?

ಮೈಸೂರು [ಜೂ.18] : ಶಾಸಕ ತನ್ವೀರ್ ಸೇಠ್ ಅವರಿಗೆ ಮಂತ್ರಿ ಸ್ಥಾನ  ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಒಟ್ಟು 70 ಮಂದಿ ಕಾಂಗ್ರೆಸ್ ಪದಾಧಿಕಾರಿಗಳ ನಿಯೋಗ ಕೆಪಿಸಿಸಿ ಕಚೇರಿಗೆ ತೆರಳಿ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. 

ಶಾಸಕ ತನ್ವೀರ್ ಸೇಠ್ ಅವರ ಬೆಂಬಲಿಗರಾದ ಮೈಸೂರಿನ 5 ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು, ಮಂಚೂಣಿ ಘಟಕದ ಅಧ್ಯಕ್ಷರು, 23 ವಾರ್ಡ್ ಅಧ್ಯಕ್ಷರು ರಾಜೀನಾಮೆಗೆ ಮುಂದಾಗಿದ್ದಾರೆ. 

ಒಟ್ಟು ಐದು ಬಾರಿ ತನ್ವೀರ್ ಸೇಠ್ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಸರ್ಕಾರದಲ್ಲಿ ಒಂದೂವರೆ ವರ್ಷಗಳ ಕಾಲ ಶಿಕ್ಷಣ ಮಂತ್ರಿಯಾಗಿ ಕೆಲಸ ಮಾಡಿರುವ ಅನುಭವವಿದೆ ಎಂದಿದ್ದಾರೆ. 

ತನ್ವೀರ್ ಸೇಠ್ ಅವರಿಗೆ ಮೈತ್ರಿ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡದೇ ಇದ್ದಲ್ಲಿ ಅವರ ಬೆಂಬಲಿಗರು ಯಾರೂ ಪಕ್ಷದಲ್ಲಿ ಮುಂದುವರಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bhatkal: ಮರ ಏರಿ ಹರಕೆ ತೀರಿಸುವ ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ಶೇಡಬರಿ ಜಾತ್ರೆ
'ನಾಯಿ-ನರಿಗಳು ಕರವೇ ಬಗ್ಗೆ ಮಾತಾಡಿದ್ರೆ ಏನ್‌ ಹೇಳೋಕೆ ಆಗುತ್ತೆ..' ಸುದೀಪ್‌ ಭೇಟಿ ಕುರಿತ ವಿವಾದದ ಬಗ್ಗೆ ನಾರಾಯಣ ಗೌಡ ತಿರುಗೇಟು