
ನವದೆಹಲಿ(ಅ.02): 2019ರ ಲೋಕಸಭೆ ಚುನಾವಣೆಗೆ ಇನ್ನೇನು ಒಂದೂವರೆ ವರ್ಷ ಉಳಿದಿದೆ. ಆದರೆ ಪಕ್ಷದ ನಿರೀಕ್ಷೆಗೆ ಅನುಗುಣವಾಗಿ ಸಂಸದರು ಕೆಲಸ ಮಾಡದೇ ಹೋದ ಕಾರಣ ಬಿಜೆಪಿ ಹೈಕಮಾಂಡ್ ಅಸಮಾಧಾನಗೊಂಡಿದೆ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ ಇಂಥ ಸಂಸದರಿಗೆ ವರಿಷ್ಠರು ಕಠಿಣ ಎಚ್ಚರಿಕೆ ನೀಡುವ ಸಾಧ್ಯತೆ ಇದೆ. ಅಲ್ಲದೆ, ಕಳಪೆ ಸಾಧನೆಯ ಕಾರಣ ಶೇ.70ರಷ್ಟು ಹಾಲಿ ಲೋಕಸಭಾ ಸದಸ್ಯರಿಗೆ ಟಿಕೆಟ್ ದೊರಕುವ ಸಾಧ್ಯತೆ ಇಲ್ಲ ಎಂದು ತಿಳಿದುಬಂದಿದೆ.
ಆಗಸ್ಟ್ ೧೫ರಂದು ಆಯಾ ಸಂಸದರು ತಮ್ಮ ಕ್ಷೇತ್ರದಲ್ಲಿ ಕೈಗೊಂಡ ತಿರಂಗಾ ಯಾತ್ರೆಯ ವೇಳೆ ದೊರೆತ ಜನಸ್ಪಂದನೆ ನೀರಸವಾಗಿತ್ತು. ಇದನ್ನು ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ಪಕ್ಷದ ಹಿರಿಯರೊಬ್ಬರು ಹೇಳಿರುವುದಾಗಿ ಆಂಗ್ಲ ದಿನಪತ್ರಿಕೆ ದ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ವರದಿ ಮಾಡಿದೆ.
ಡಿಜಿಟಲ್ ಪೇಮೆಂಟ್‌ಗೆ ಆದ್ಯತೆ ನೀಡುವ ಭೀಮ್ ಆ್ಯಪ್ ಅನ್ನು ಹೆಚ್ಚು ಜನರು ಡೌನ್‌ಲೋಡ್ ಮಾಡಿಕೊಳ್ಳುವಂತಾಗಬೇಕು ಎಂಬ ಗುರಿಯನ್ನು ಸಂಸದರಿಗೆ ನೀಡಲಾಗಿತ್ತು. ಆದರೆ ಈ ಗುರಿ ತಲುಪುವಲ್ಲಿ ಬಹುತೇಕ ಸಂಸದರು ವಿಲರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಪ್ರಧಾನಿಯವರ ಸಾಧನೆಯ ಬಗ್ಗೆ ಜನರಲ್ಲಿ ತೃಪ್ತಿ ಇದೆ ಎಂದೂ ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.